ಇಡ್ಕಿದು ಸೇವಾ ಸಹಕಾರಿ ಸಂಘ ನಿಯಮಿತ ಇದರ ಆಶ್ರಯದಲ್ಲಿ ರೋಟರಿ ಕ್ಲಬ್ ಪುತ್ತೂರು ಸಿಟಿ ಇವರ ಸಹಭಾಗಿತ್ವದಲ್ಲಿ ಕೆ.ಎಂ.ಸಿ ಆಸ್ಪತ್ರೆ ಅತ್ತಾವರ ಮಂಗಳೂರು ಇವರಿಂದ ಉಚಿತ ವೈದ್ಯಕೀಯ ಶಿಬಿರವು ಸೆ. 3ನೇ ಮಂಗಳವಾರದಂದು ಬೆಳಿಗ್ಗೆ 9:00 ರಿಂದ ಮಧ್ಯಾಹ್ನ12:30 ರವರೆಗೆ ಇಡ್ಕಿದು ಸೇವಾ ಸಹಕಾರಿ ಸಂಘದ ಶತಾಮೃತ ಆವರಣ ಉರಿಮಜಲು ಇಲ್ಲಿ ನಡೆಯಲಿದೆ.
ಬೆಳಿಗ್ಗೆ 9:15ಕ್ಕೆ ಶಿಬಿರ ಉದ್ಘಾಟನೆ ಮತ್ತು ಸಭಾ ಕಾರ್ಯಕ್ರಮ ನಡೆಯಲಿದೆ. ಪುತ್ತೂರಿನ ತಾಲೂಕು ಆರೋಗ್ಯಾಧಿಕಾರಿ ಡಾ.ದೀಪಕ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಇಡ್ಕಿದು ಸೇವಾ ಸಹಕಾರಿ ಸಂಘ ನಿ. ಅಧ್ಯಕ್ಷರು ಬಿ.ಸುಧಾಕರ್ ಶೆಟ್ಟಿ ಕಾರ್ಯಕ್ರಮ ಅಧ್ಯಕ್ಷತೆ ವಹಿಸಲಿದ್ದಾರೆ. ಇಡ್ಕಿದು ಗ್ರಾಮ ಪಂಚಾಯತ್ ಅಧ್ಯಕ್ಷರು ಮೋಹಿನಿ ಜಯಕರ, ರೋಟರಿ ಕ್ಲಬ್ ಪುತ್ತೂರು ಸಿಟಿ ಅಧ್ಯಕ್ಷರು ರೋ| ಮಹಮ್ಮದ್ ಸಾಹೇಬ್, BAMS,MD (AYU) ನಮನ ಕ್ಲಿನಿಕ್ ಉರಿಮಜಲು ಕೀರ್ತನ್ ಶೆಟ್ಟಿ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ಶಿಬಿರದಲ್ಲಿ MD,DM ಕಿಡ್ನಿ ಮತ್ತು ಮೂತ್ರ ರೋಗ ತಜ್ಞ ಡಾ. ಭೂಷಣ್ ಶೆಟ್ಟಿ, MD,DNB ಕ್ಯಾನ್ಸರ್ ರೋಗ ತಜ್ಞ ಡಾ. ಅಭಿಷೇಕ್ ಕೃಷ್ಣ, Ms.Dr.NB Diabetic Foot (Onco reconstruction surgeon) ಡಾ.ಕೃಷ್ಣಪ್ರಸಾದ್ ಶೆಟ್ಟಿ ಮತ್ತು ಇವರ ತಂಡದ ತಜ್ಞ ವೈದ್ಯರುಗಳು ಭಾಗವಹಿಸಲಿದ್ದಾರೆ.
ಸಂಘದ ಸದಸ್ಯರು, ಸಾರ್ವಜನಿಕರು ಈ ಶಿಬಿರದ ಪ್ರಯೋಜನ ಪಡೆದುಕೊಳ್ಳುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.