Friday, May 3, 2024
spot_imgspot_img
spot_imgspot_img

ನಾಳೆ ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ

- Advertisement -G L Acharya panikkar
- Advertisement -

ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ನಾಳೆ ಪ್ರಕಟವಾಗಲಿದೆ. ನಾಳೆ ಬೆಳಗ್ಗೆ 10 ಗಂಟೆಗೆ ಶಿಕ್ಷಣ ಇಲಾಖೆ ಅಧಿಕಾರಿಗಳಿಂದ ಸುದ್ದಿಗೋಷ್ಠಿ ನಡೆಸಿದ ಬಳಿಕ ವೆಬ್‌ಸೈಟ್‌ನಲ್ಲಿ ಫಲಿತಾಂಶ ಪ್ರಕಟವಾಗಲಿದೆ.

ರಾಜ್ಯಾದ್ಯಂತ ಈ ಬಾರಿ 1,124 ಕೇಂದ್ರಗಳಲ್ಲಿ 6.98 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದರು. 2023-24 ಸಾಲಿನಿಂದ ದ್ವಿತೀಯ ಪಿಯುಸಿ ಪರೀಕ್ಷೆ 80-20 ಮಾದರಿಯಲ್ಲಿ ಇರುತ್ತದೆ. ವಿದ್ಯಾರ್ಥಿಗಳು ಲಿಖಿತ ರೂಪದಲ್ಲಿ 80 ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಇನ್ನು ಉಳಿದ 20 ಅಂಕಗಳು ಆಂತರಿಕ ಮೌಲ್ಯಮಾಪನದ ಮೂಲಕ ನೀಡಲಾಗುತ್ತದೆ.

ವಿದ್ಯಾರ್ಥಿಗಳು ಮತ್ತು ಪೋಷಕರು ‌ ಶಿಕ್ಷಣ ಇಲಾಖೆಯ ವೆಬ್‌ಸೈಟ್‌ www.karresultsnic.in ಭೇಟಿ ನೀಡಿ ಫಲಿತಾಂಶವನ್ನು ವೀಕ್ಷಿಸಬಹುದು.

- Advertisement -

Related news

error: Content is protected !!