Friday, March 29, 2024
spot_imgspot_img
spot_imgspot_img

ದ್ವಿತೀಯ ಪಿಯುಸಿ ಪರೀಕ್ಷೆ ರದ್ದು; ಶಿಕ್ಷಣ ಸಚಿವ ಸುರೇಶ್ ಕುಮಾರ್ ಘೋಷಣೆ!

- Advertisement -G L Acharya panikkar
- Advertisement -

ಕೋವಿಡ್ ಎರಡನೇ ಅಲೆಯ ತೀವ್ರತೆಯ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ದ್ವಿತೀಯ ಪಿಯುಸಿ ಪರೀಕ್ಷೆಗಳನ್ನು ರದ್ದುಗೊಳಿಸಿದೆ.

ಭಾರೀ ಕುತೂಹಲ ಕೆರಳಿಸಿದ್ದ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಇಂದಿನ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರವಾಗಿ ಪ್ರಕಟನೆ ನೀಡಿದ್ದು, ಈ ವರ್ಷದ ದ್ವಿತೀಯ ಪಿಯುಸಿ ಪರೀಕ್ಷೆ ರದ್ದು ಮಾಡಲಾಗಿದೆ ಎಂದು ಘೋಷಿಸಿದ್ದಾರೆ. ಪ್ರಥಮ ಪಿಯುಸಿಯ ಅಂಕದ ಆಧಾರದಲ್ಲಿ ಗ್ರೇಡಿಂಗ್ ನೀಡಲಿದ್ದು, ಫಲಿತಾಂಶದ ಬಗ್ಗೆ ಸಮಾಧಾನವಿಲ್ಲದ ಮಕ್ಕಳಿಗೆ ಕೊರೊನಾ ಕಡಿಮೆಯಾದ ನಂತರ ಪರೀಕ್ಷೆ ಮಾಡಲಾಗುವುದು ಎಂದು ಅವರು ಹೇಳಿದ್ದಾರೆ. ಅಲ್ಲದೇ ಮಕ್ಕಳ ಮುಂದಿನ ಭವಿಷ್ಯಕ್ಕೂ ಸಚಿವರು ಈ ಸಂದರ್ಭದಲ್ಲಿ ಶುಭ ಹಾರೈಸಿದ್ದಾರೆ.

SSLC ಮಕ್ಕಳಿಗೆ ಪರೀಕ್ಷೆ ಮಾಡುವ ನಿರ್ಧಾರ ಮಾಡಲಾಗಿದ್ದು, ವಿಜ್ಞಾನ, ಗಣಿತ ಹಾಗೂ ಸಮಾಜ ವಿಜ್ಞಾನ ವಿಷಯಗಳಿಗೆ ಸಂಬಂಧಿಸಿದ ಪ್ರಶ್ನೆ ಪತ್ರಿಕೆ ಹಾಗೂ ಐಚ್ಛಿಕ ಭಾಷೆಯ ಒಂದು ಪ್ರಶ್ನೆ ಪತ್ರಿಕೆಯ ಒಟ್ಟು ಎರಡು ಪರೀಕ್ಷೆ ನಡೆಯಲಿದೆ.

- Advertisement -

Related news

error: Content is protected !!