ಪೆರ್ಡೂರು: ಸ್ಥಳೀಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿರುವ ಗೆಳೆಯರ ಬಳಗ (ರಿ.) ಪೆರ್ಡೂರು ಸಂಸ್ಥೆಯ 2026–27ನೇ ಸಾಲಿನ 15ನೇ ನೂತನ ಪದಾಧಿಕಾರಿಗಳನ್ನು ಸರ್ವಾನುಮತದಿಂದ ಆಯ್ಕೆ ಮಾಡಲಾಯಿತು.

ಸಂಸ್ಥೆಯ ಸ್ಥಾಪಕ ಅಧ್ಯಕ್ಷರಾಗಿ ಸತೀಶ್ ಪೆರ್ಡೂರ್ ಹಾಗೂ ಗೌರವ ಅಧ್ಯಕ್ಷರಾಗಿ ಸತೀಶ್ ಕುಮಾರ್ ಮುಂದುವರಿಯಲಿದ್ದಾರೆ. ಗೌರವ ಸಲಹೆಗಾರರಾಗಿ ಸತೀಶ್ ಶೆಟ್ಟಿ ಕುತ್ಯಾರು ಬೀಡು ಆಯ್ಕೆಯಾಗಿದ್ದಾರೆ.
ಅಧ್ಯಕ್ಷರಾಗಿ ಜನಾರ್ಧನ್ ಮಡಿವಾಳ, ಉಪಾಧ್ಯಕ್ಷರಾಗಿ ಮಂಜುನಾಥ್ ಶೆಟ್ಟಿ, ಕಾರ್ಯದರ್ಶಿಯಾಗಿ ವಿಜಯ್ ಕುಲಾಲ್, ಜೊತೆ ಕಾರ್ಯದರ್ಶಿಯಾಗಿ ಪ್ರಕಾಶ್ ಆಚಾರ್ಯ ಆಯ್ಕೆಯಾಗಿದ್ದಾರೆ.
ಕೋಶಾಧಿಕಾರಿಯಾಗಿ ಪ್ರಕಾಶ್ ಮಾಸ್ಟರ್ ಹಾಗೂ ಜೊತೆ ಕೋಶಾಧಿಕಾರಿಯಾಗಿ ಗುರುಕಿರಣ್ ಶೆಟ್ಟಿ ಆಯ್ಕೆಯಾಗಿದ್ದಾರೆ.
ಸದಸ್ಯರಾಗಿ ನಿಶ್ವಲ್ ಶೆಟ್ಟಿ, ಸುಕೇಶ್ ಶೆಟ್ಟಿ, ಸುಭಾಷ್ ಶೆಟ್ಟಿ, ರಿತೇಶ್ ಮುನ್ನ, ಸಂದೇಶ್ ಕುಮಾರ್ ಟಿ.ವಿ., ಮಹೇಶ್ ಶೆಟ್ಟಿ, ನಿತಿನ್ ಶೆಟ್ಟಿ, ಕೃಷ್ಣ ಪೂಜಾರಿ, ಶ್ರೀನಿವಾಸ್ ಕುಟ್ಟಿ, ಸುಜಿತ್ ಹೆಗ್ಡೆ, ನಿತಿನ್ ಮೆಂಡನ್, ಅವಿನಾಶ್ ಭಟ್, ಸಂಜನ್ ಶೆಟ್ಟಿ, ರಾಘವೇಂದ್ರ ನಾಯಕ್, ಶೌರ್ಯ ಶೆಟ್ಟಿ ಹಾಗೂ ಕೃಷ್ಣ ಶೆಟ್ಟಿಗಾರ್ ಅವರು ಆಯ್ಕೆಯಾಗಿದ್ದಾರೆ.








