Monday, May 20, 2024
spot_imgspot_img
spot_imgspot_img

ವಿಟ್ಲ: ಬಾಲವಿಕಾಸ‌ದ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ದೇವಿಕಾ ಕೆ. ಜಿಲ್ಲಾ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಗೆ ಆಯ್ಕೆ

- Advertisement -G L Acharya panikkar
- Advertisement -

ವಿಟ್ಲ : ದಕ್ಷಿಣ ಕನ್ನಡ ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ, ಬಂಟ್ವಾಳ ಇದರ ಆಶ್ರಯದಲ್ಲಿ ನವೆಂಬರ್ 06 ರಂದು ಸೈಂಟ್ ಪ್ಯಾಟ್ರಿಕ್ ಆಂಗ್ಲ ಮಾಧ್ಯಮ ಶಾಲೆ ಸಿದ್ಧಕಟ್ಟೆ ಇಲ್ಲಿ ನಡೆದ ಬಂಟ್ವಾಳ ತಾಲೂಕು ಮಟ್ಟದ ಪ್ರೌಢಶಾಲಾ ವಿಭಾಗದ ಪ್ರತಿಭಾ ಕಾರಂಜಿ ಸ್ಪರ್ಧೆಗಳಲ್ಲಿ ಪೆರಾಜೆ ವಿದ್ಯಾನಗರದ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯ 8ನೇ ತರಗತಿಯ ವಿದ್ಯಾರ್ಥಿನಿ ಕುl ದೇವಿಕಾ ಕೆ, ಕನ್ನಡ ಕವನ ವಾಚನ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ಸಂಸ್ಕೃತ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ 9ನೇ ತರಗತಿಯ ವಿದ್ಯಾರ್ಥಿನಿ ಕುlಸ್ವಸ್ತಿ ದ್ವಿತೀಯ ಸ್ಥಾನ, ಅರೇಬಿಕ್ ಧಾರ್ಮಿಕ ಪಠಣ ಸ್ಪರ್ಧೆಯಲ್ಲಿ ಹತ್ತನೇ ತರಗತಿಯ ವಿದ್ಯಾರ್ಥಿ ಮುಹಮ್ಮದ್ ಅಜ್ಮಲ್ ದ್ವಿತೀಯ ಸ್ಥಾನ ಹಾಗೂ ಹಿಂದಿ ಭಾಷಣ ಸ್ಪರ್ಧೆಯಲ್ಲಿ 10ನೇ ತರಗತಿಯ ವಿದ್ಯಾರ್ಥಿನಿ ಕುl ವೃದ್ಧಿ ಎ.ಕೊಂಡೆ ತೃತೀಯ ಸ್ಥಾನವನ್ನು ಪಡೆದಿದ್ದಾರೆ.

ಸ್ಪರ್ಧಾ ವಿಜೇತರನ್ನು ಹಾಗೂ ಸ್ಪರ್ಧೆಯಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳನ್ನು ಶಾಲಾ ಮುಖ್ಯಸ್ಥರು ಹಾಗೂ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.

- Advertisement -

Related news

error: Content is protected !!