Thursday, July 23, 2026
spot_imgspot_img
spot_imgspot_img

ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ; 1.26 ಕೋಟಿ ರೂ. ಮೌಲ್ಯದ ವಸ್ತು ಸಹಿತ ನಾಲ್ವರು ವಶಕ್ಕೆ

- Advertisement -
- Advertisement -

ಬೆಂಗಳೂರು: ನಂದಿನಿ ಬ್ರ್ಯಾಂಡ್ ಹೆಸರಲ್ಲಿ ನಕಲಿ ತುಪ್ಪ ಮಾರಾಟ ಬೃಹತ್ ಜಾಲವೊಂದು ನಗರದಲ್ಲಿ ಪತ್ತೆ ಆಗಿದೆ. ಸಿಸಿಬಿ ಪೊಲೀಸರು ಮತ್ತು ಕೆಎಂಎಫ್ ಜಾಗೃತ ದಳ ಜಂಟಿ ಕಾರ್ಯಾಚರಣೆ ನಡೆಸಿ ಬೃಹತ್ ಜಾಲ ಪತ್ತೆ ಮಾಡಿದ್ದು, ಕೆಎಂಎಫ್ ವಿತರಕ ಸೇರಿದಂತೆ ನಾಲ್ವರನ್ನು ಬಂಧಿಸಿದ್ದಾರೆ.

ಮಹೇಂದ್ರ, ದೀಪಕ್, ಮುನಿರಾಜು, ಅಭಿ ಅರಸು ಬಂಧಿತರು. ಒಟ್ಟು 1.26 ಕೋಟಿ ರೂ. ಮೌಲ್ಯದ ವಸ್ತುವನ್ನು ಬಂಧಿತರಿಂದ ಜಪ್ತಿ ಮಾಡಲಾಗಿದೆ.

ಬೆಂಗಳೂರಿನಿಂದ ತಮಿಳುನಾಡಿಗೆ ಶುದ್ಧ ನಂದಿನಿ ತುಪ್ಪ ಪೂರೈಕೆ ಮಾಡುತ್ತಿದ್ದರು. ಕೆಎಂಎಫ್ ಡಿಸ್ಟ್ರಿಬ್ಯೂಟರ್ ಮಹೇಂದ್ರ ಒರಿಜಿನಲ್ ತುಪ್ಪ ಖರೀದಿಸುತ್ತಿದ್ದರು. ಇಲ್ಲಿ ಖರೀದಿಸಿದ ಒರಿಜಿನಲ್ ತುಪ್ಪ ತಮಿಳುನಾಡಿಗೆ ಕಳುಹಿಸುತ್ತಿದ್ದರು. ಅದನ್ನ ತಮಿಳುನಾಡಿನಲ್ಲಿ ಕಲಬೆರಕೆ ಮಾಡುತ್ತಿದ್ದರು. ಒಂದು ಲೀಟರ್ ತುಪ್ಪಕ್ಕೆ 4 ಲೀಟರ್ ನಕಲಿ ತುಪ್ಪ ಬೆರೆಸುತ್ತಿದ್ದರು. ಫಾರ್ಮ್ ಆಯಿಲ್, ತೆಂಗಿನ ಎಣ್ಣೆ ಮತ್ತು ಡಾಲ್ಡಾ ಬೆರೆಸುತ್ತಿದ್ದರು. ಅದನ್ನ ಮತ್ತೆ ಕರ್ನಾಟಕಕ್ಕೆ ತಂದು ಮಾರಾಟ ಮಾಡುತ್ತಿದ್ದರು.

ನಿನ್ನೆ ಚಾಮರಾಜಪೇಟೆಯ ನಂಜಾಂಬ ಅಗ್ರಹಾರದಲ್ಲಿರುವ ಕೃಷ್ಣ ಎಂಟರ್​ಪ್ರೈಸಸ್ ಮಾಲೀಕರಿಗೆ ಸೇರಿದ ಗೋಡೌನ್ ಹಾಗೂ ಅಂಗಡಿಗಳ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ಮಾಡಿದ್ದಾರೆ. ದಾಳಿ ವೇಳೆ ಒಟ್ಟು 8,136 ಲೀಟರ್ ಕಲಬೆರಕೆ ತುಪ್ಪ, 4 ವಾಹನ, ತೆಂಗು ಹಾಗೂ ಫಾಮ್​​​ ಆಯಿಲ್, ನಕಲಿ ತುಪ್ಪ ತಯಾರು ಮಾಡುವ ಯಂತ್ರಗಳು ಸೇರಿ 1 ಕೋಟಿ 26 ಲಕ್ಷದ 95 ಸಾವಿರ ರೂ. ಮೌಲ್ಯದ ವಸ್ತುಗಳನ್ನು ವಶಕ್ಕೆ ಪಡೆಯಲಾಗಿದೆ.

- Advertisement -

Related news

error: Content is protected !!