Monday, June 15, 2026
spot_imgspot_img
spot_imgspot_img

ಬಿಜೆಪಿ ಹಿರಿಯ ನಾಯಕ ಮಾಜಿ ಎಂಎಲ್‌ಸಿ ಭಾನುಪ್ರಕಾಶ್ ನಿಧನ..!

- Advertisement -
- Advertisement -

ಲೋಕಸಭಾ ಕ್ಲಸ್ಟರ್ ಸಂಚಾಲಕರು, ಮಾಜಿ ವಿಧಾನ ಪರಿಷತ್ ಸದಸ್ಯರು ಹಾಗೂ ಹಿರಿಯ ಬಿಜೆಪಿ ನಾಯಕರಾದ ಶ್ರೀ ಭಾನುಪ್ರಕಾಶ್ ಅವರು ಹೃದಯಾಘಾತದಿಂದ ನಿಧನರಾಗಿದ್ದಾರೆ

ನಗರದ ಗೋಪಿ ಸರ್ಕಲ್‍ನಲ್ಲಿ ಪೆಟ್ರೋಲ್ ಹಾಗೂ ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆಯಲ್ಲಿ ಅವರು ಭಾಗಿಯಾಗಿದ್ದರು. ಈ ವೇಳೆ ಅವರು ತೀವ್ರ ಹೃದಯಾಘಾತವಾಗಿ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ

ಇಂದು ನಡೆಯಬೇಕಾಗಿದ್ದ ವಾಹನ ಜಾಥಾ ಮತ್ತು ಅಭಿನಂದನಾ ಕಾರ್ಯಕ್ರಮವನ್ನು ಮುಂದೂಡಲಾಗಿದೆ.

- Advertisement -

Related news

error: Content is protected !!