Monday, February 10, 2025
spot_imgspot_img
spot_imgspot_img

ಹಿರಿಯ ಪತ್ರಕರ್ತ ಗುರುವಪ್ಪ ಬಾಳೆಪುಣಿ ನಿಧನ..!

- Advertisement -
- Advertisement -

ಮಂಗಳೂರು: ಹಿರಿಯ ಪತ್ರಕರ್ತ, ಹೊಸದಿಗಂತ ಪತ್ರಿಕೆಯ ವಿಶೇಷ ವರದಿಗಾರ ಗುರುವಪ್ಪ ಬಾಳೆಪುಣಿ (62) ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬಾಳೆಪುಣಿಯ ಸ್ವಗೃಹದಲ್ಲಿ ನಿಧನರಾಗಿದ್ದಾರೆ.

ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿಯಾಗಿ, ಮಂಗಳೂರು ಪ್ರೆಸ್ ಕ್ಲಬ್ ಪ್ರಧಾನ ಕಾರ್ಯದರ್ಶಿಯಾಗಿ ಸೇವೆ ಸಲ್ಲಿಸಿದ್ದ ಗುರುವಪ್ಪ ಅವರು 26 ವರ್ಷ ಹೊಸದಿಗಂತ ಪತ್ರಿಕೆಯ ವರದಿಗಾರನಾಗಿ ಕಾರ್ಯ ನಿರ್ವಹಿಸಿದ್ದರು. ಮಂಗಳೂರು ಮಿತ್ರ, ಕರಾವಳಿ ಅಲೆ ಪತ್ರಿಕೆಗಳಲ್ಲಿಯೂ ವರದಿಗಾರನಾಗಿ ಕಾರ್ಯನಿರ್ವಹಿಸಿದ್ದರು.

ಹರೇಕಳ ಹಾಜಬ್ಬ ಅವರನ್ನು ಮೊದಲ ಬಾರಿಗೆ ನಾಡಿಗೆ ಪರಿಚಯಿಸಿದ ಕೀರ್ತಿ ಇವರದ್ದು. ಕರ್ನಾಟಕ ಮಾಧ್ಯಮ ಅಕಾಡೆಮಿ ಪ್ರಶಸ್ತಿ, ರಾಜ್ಯ ಸರ್ಕಾರದ ಡಾ.ಬಿ.ಆರ್.ಅಂಬೇಡ್ಕರ್ ಪ್ರಶಸ್ತಿ, ರಾಷ್ಟ್ರೀಯ ಮಟ್ಟದ ಸರೋಜಿನಿ ನಾಯ್ಡು ಪ್ರಶಸ್ತಿ ಸಹಿತ ಹಲವು ಪ್ರಶಸ್ತಿ ಪುರಸ್ಕೃತರಾಗಿದ್ದಾರೆ. ಮೃತರು ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

- Advertisement -

Related news

error: Content is protected !!