Tuesday, July 21, 2026
spot_imgspot_img
spot_imgspot_img

ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯ ಅಶೋಕ್ ಕುಮಾರ್ ಶೆಟ್ಟಿ ಅವಿರೋಧ ಆಯ್ಕೆ

- Advertisement -
- Advertisement -

ವಿಟ್ಲ ಪಟ್ಟಣ ಪಂಚಾಯತ್ ನ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಹಿರಿಯ ಸದಸ್ಯರಾದ ಅಶೋಕ್ ಕುಮಾರ್ ಶೆಟ್ಟಿಯವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಲ್ಕು ಬಾರಿ ಗ್ರಾಮ ಪಂಚಾಯತ್ ಸದಸ್ಯರಾಗಿ, ಎರಡು ಬಾರಿ ಪಟ್ಟಣ ಪಂಚಾಯತ್ ಸದಸ್ಯರಾಗಿ ಆಯ್ಕೆಯಾಗಿರುವ ಇವರು ಹಿರಿಯ ಅನುಭವಿ ರಾಜಕಾರಣಿಯಾಗಿದ್ದು, ಅನೇಕ ಸಂಘ ಸಂಸ್ಥೆಗಳ ಪದಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದಾರೆ. ವಿಟ್ಲ ಪಟ್ಟಣ ಪಂಚಾಯಿತಿಯ ಚುನಾಯಿತ ಮಂಡಳಿಯ ಮೊದಲ ವರ್ಷದ ಸ್ಥಾಯಿ ಸಮಿತಿಯ ಅವಧಿ ಮುಗಿದಿರುವುದರಿಂದ ಎರಡನೇ ಅವಧಿಯ ಸ್ಥಾಯಿ ಸಮಿತಿಯ ಅಧ್ಯಕ್ಷರ ಆಯ್ಕೆಯ ಬಗ್ಗೆ ಸಮಿತಿಯ ಸದಸ್ಯರ ಸಭೆಯು ವಿಟ್ಲ ಪಟ್ಟಣ ಪಂಚಾಯಿತಿಯ ಸಭಾಂಗಣದಲ್ಲಿ ಪಟ್ಟಣ ಪಂಚಾಯಿತಿ ಅಧ್ಯಕ್ಷರಾದ ಕರುಣಾಕರ ನಾಯ್ತೊಟ್ಟುರವರ ಅಧ್ಯಕ್ಷತೆಯಲ್ಲಿ ಜರುಗಿತು. ಸಭೆಯಲ್ಲಿ ಸಮಿತಿಯ ಸದಸ್ಯರಾದ ಶ್ರೀ ಅರುಣ್ ರವರ ಸೂಚನೆಯಂತೆ ಸರ್ವಾನುಮತದಿಂದ ಶ್ರೀ ಅಶೋಕ್ ಶೆಟ್ಟಿಯವರನ್ನು ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಆಯ್ಕೆ ಮಾಡಲಾಯಿತು.

ಈ ಸಂದರ್ಭದಲ್ಲಿ ಪಟ್ಟಣ ಪಂಚಾಯತ್ ಅಧ್ಯಕ್ಷ ಕರುಣಾಕರ ನಾಯೊಟ್ಟು, ಉಪಾಧ್ಯಕ್ಷೆ ಸಂಗೀತ ಪಾಣೆಮಜಲು, ಸ್ಥಾಯಿ ಸಮಿತಿಯ ನಿಕಟಪೂರ್ವ ಅಧ್ಯಕ್ಷ ರವಿಪ್ರಕಾಶ್, ಸದಸ್ಯರಾದ ಅರುಣ್ ವಿಟ್ಲ, ಜಯಂತ್ ಸಿಎಚ್, ವಸಂತ್ ಕುಲಾಲ್, ಕೃಷ್ಣ ಎನ್, ರಕ್ಷಿತಾ ಸನತ್, ಸುನೀತಾ ಪೂಜಾರಿ, ವಿಜಯಲಕ್ಷ್ಮಿ ಪುಷ್ಪರಾಜ್ ಮತ್ತು ಪಟ್ಟಣ ಪಂಚಾಯತ್‌ನ ಸಿಬ್ಬಂಧಿಗಳು ಉಪಸ್ಥಿತರಿದ್ದು, ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಅಭಿನಂದಿಸಿದರು.

- Advertisement -

Related news

error: Content is protected !!