- Advertisement -
- Advertisement -
ಹಾಸನದಲ್ಲಿರುವ ಜನಪ್ರಿಯ ಆಸ್ಪತ್ರೆಯ ಸಹಸಂಸ್ಥೆ, ಮಂಗಳೂರಿನ ಪಡೀಲಿನಲ್ಲಿ ನೂತನವಾಗಿ ಪ್ರಾರಂಭಗೊಂಡ ಜನಪ್ರಿಯ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯ ಅದ್ದೂರಿ ಉದ್ಘಾಟನಾ ಸಮಾರಂಭ ಹಾಗೂ ಜನಪ್ರಿಯ ಸಮ್ಮಿಲನ ಕಾರ್ಯಕ್ರಮ ಸೆ.29 ರಂದು ಸಂಜೆ ನಡೆಯಲಿದೆ.
ಆಸ್ಪತ್ರೆಯ ಉದ್ಘಾಟನಾ ಕಾರ್ಯಕ್ರಮವನ್ನು ಸ್ಪೀಕರ್ ಯು.ಟಿ.ಖಾದರ್ ನಡೆಸಲಿದ್ದಾರೆ. ಕರ್ನಾಟಕ ವೈದ್ಯಕೀಯ ಶಿಕ್ಷಣ ಸಚಿವ ಡಾ. ಶರಣಪ್ರಕಾಶ ರುದ್ರಪ್ಪ ಪಾಟೀಲ್ ಬರ್ತ್ ಬ್ಲೂಮ್ ವಿಭಾಗವನ್ನು ಉದ್ಘಾಟಿಸಲಿದ್ದಾರೆ.
ಮಂಗಳೂರು ದಕ್ಷಿಣ ಶಾಸಕ ಡಿ. ವೇದವ್ಯಾಸ್ ಕಾಮತ್ ಕಾರ್ಯಕ್ರಮದ ಅಧ್ಯಕ್ಷತೆಯಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ ವಿವಿಧ ಕ್ಷೇತ್ರದ ಗಣ್ಯರು ಆಗಮಿಸಲಿದ್ದಾರೆ ಎಂದು ಜನಪ್ರಿಯ ಫೌಂಡೇಶನ್ ಅಧ್ಯಕ್ಷ ಡಾ.ಅಬ್ದುಲ್ ಬಶೀರ್ ವಿ.ಕೆ. ತಿಳಿಸಿದ್ದಾರೆ.
- Advertisement -