Sunday, May 19, 2024
spot_imgspot_img
spot_imgspot_img

ನಾಳೆ ದಕ್ಷಿಣ ಕನ್ನಡ ಜಿಲ್ಲೆಯ 430 ಕಡೆಗಳಲ್ಲಿ ಬೃಹತ್ ಲಸಿಕಾ ಶಿಬಿರ

- Advertisement -G L Acharya panikkar
- Advertisement -

ಮಂಗಳೂರು: ದಕ್ಷಿಣಕನ್ನಡ ಜಿಲ್ಲೆಯಲ್ಲಿ ಇದೇ ಸೆಪ್ಟೆಂಬರ್ 8ರ ಬುಧವಾರ ಕೋವಿಡ್ ಲಸಿಕೆಯ ಲಕ್ಷ ಲಸಿಕಾ ಮೇಳವನ್ನು ಹಮ್ಮಿಕೊಳ್ಳಲಾಗಿದೆ. ಈ ಬೃಹತ್ ಲಸಿಕಾ ಕಾರ್ಯಕ್ರಮಕ್ಕೆ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ತಿಳಿಸಿದ್ದಾರೆ.

ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಟಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ.

ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದರು.

- Advertisement -

Related news

error: Content is protected !!