Thursday, April 25, 2024
spot_imgspot_img
spot_imgspot_img

ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನ-10 ಜನರ ಬಂಧನ

- Advertisement -G L Acharya panikkar
- Advertisement -

ಕಲಬುರಗಿ(ನ.1): ಕಲ್ಯಾಣ ಕರ್ನಾಟಕ ಭಾಗದ ಅಭಿವೃದ್ಧಿ ಬಗ್ಗೆ ನಿರ್ಲಕ್ಷ್ಯ ಖಂಡಿಸಿ ಇಂದು ರಾಜ್ಯೋತ್ಸವ ಕಾರ್ಯಕ್ರಮಕ್ಕೆ ಬಹಿಷ್ಕಾರ ಹಾಕಿ ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದ ಹತ್ತಕ್ಕೂ ಹಚ್ಚು ಜನರನ್ನು ಬಂಧಿಸಲಾಯಿತು.

ಕಲ್ಯಾಣ ಕರ್ನಾಟಕ ಪ್ರತ್ಯೇಕ ರಾಜ್ಯ ಹೋರಾಟ ಸಮಿತಿ ನೇತೃತ್ವದಲ್ಲಿ ಇಲ್ಲಿನ ಸರ್ದಾರ್ ವಲ್ಲಭಭಾಯಿ ಪಟೇಲ್ ವೃತ್ತದಲ್ಲಿ ಪ್ರತ್ಯೇಕ ರಾಜ್ಯ ಧ್ವಜಾರೋಹಣಕ್ಕೆ ಯತ್ನಿಸಿದಾಗ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ನರಿಬೋಳ ಹಾಗೂ ಸದಸ್ಯರನ್ನು ಪೊಲೀಸರು ವಶಕ್ಕೆ ಪಡೆದರು.

ಸಚಿವ ಸ್ಥಾನ ನೀಡದೆ ಅನ್ಯಾಯ ಮಾಡಲಾಗಿದೆ. ಸಂವಿಧಾನದ ಕಲಂ 371 ಕ್ಕೆ ತಿದ್ದುಪಡಿ ತಂದರೂ ಪ್ರಯೋಜನವಾಗುತ್ತಿಲ್ಲ.ಈ ಭಾಗಕ್ಕೆ ಸಿಗಬೇಕಾದ ಉದ್ಯೋಗ ಮೀಸಲಾತಿಯಲ್ಲಿಯೂ ತಾರತಮ್ಯ ಮಾಡಲಾಗುತ್ತಿದೆ. ಅನ್ಯಾಯದ ಮೇಲೆ ಅನ್ಯಾಯ ನಡೆಯುತ್ತದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿ, ಪ್ರತ್ಯೇಕ ರಾಜ್ಯ ಸಮಿತಿಯಿಂದ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದಲ್ಲಿ ಉಪ ಚುನಾವಣೆಗೂ ಸ್ಪರ್ಧಿಸುವುದಾಗಿ ಸಮಿತಿ ಅಧ್ಯಕ್ಷ ಎಂ.ಎಸ್.ಪಾಟೀಲ್ ತಿಳಿದಿದ್ದಾರೆ.

- Advertisement -

Related news

error: Content is protected !!