Thursday, April 25, 2024
spot_imgspot_img
spot_imgspot_img

ಸೆಪ್ಟಂಬರ್ 21ರಿಂದ ಕೇವಲ ಶಾಲೆ ತೆರೆಯಲಿದೆ. ಆದರೆ ತರಗತಿ ಪ್ರಾರಂಭ ಇಲ್ಲ-ಸುರೇಶ ಕುಮಾರ್

- Advertisement -G L Acharya panikkar
- Advertisement -

ಮೈಸೂರು: ಸೆಪ್ಟಂಬರ್ 21ರಿಂದ ಶಾಲೆಗಳು ಕೇವಲ ಶಾಲೆ ತೆರಯಲಿದೆ. ಆದರೆ ತರಗತಿ ಪ್ರಾರಂಭ ಇಲ್ಲ ಎಂದು ಶಿಕ್ಷಣ ಸಚಿವ ಸುರೇಶ ಕುಮಾರ್ ತಿಳಿಸಿದ್ದಾರೆ.

ಸೆ. 30ರೊಳಗೆ 1ರಿಂದ 10ನೇ ತರಗತಿಯ ವಿದ್ಯಾರ್ಥಿಗಳ ದಾಖಲಾತಿ ಪ್ರಕ್ರಿಯೆಗಳನ್ನು ಎಲ್ಲಾ ಶಿಕ್ಷಣ ಸಂಸ್ಥೆಗಳು ಮುಗಿಸಬೇಕು. ಕೇಂದ್ರ ಸರಕಾರದ ಗ್ರೀನ್ ಸಿಗ್ನಲ್ ಬರುವವರೆಗೂ ತರಗತಿಗಳ ಆರಂಭ ಇಲ್ಲ. ಕೇವಲ ಒಂದು ಟರ್ಮ್ ಫೀಸ್ ಮಾತ್ರ ಖಾಸಗಿ ಶಾಲೆ ಪಡೆಯಬೇಕು. ಆಗೊಮ್ಮೆ ಸಮಸ್ಯೆ ಆದರೆ ಡಿಡಿಪಿಐ, ಬಿಇಒ ಈ‌ ಬಗ್ಗೆ ಕ್ರಮ‌ ಕೈಗೊಳ್ಳುತ್ತಾರೆ. ಅವರಿಗೆ ಈಗಾಗಲೇ ಸರ್ಕಾರದಿಂದ ಸೂಚನೆ ಕೊಟ್ಟಿದ್ದೇವೆ. ಯಾವುದೇ ಪೋಷಕರಿಗೆ ಇದರಿಂದ ಸಮಸ್ಯೆ ಆದರೆ ಬಿಇಒ ಸಂಪರ್ಕಿಸಿ ಎಂದು ಹೇಳಿದರು.

ಖಾಸಗಿ ಶಾಲೆಯಿಂದ ಸರ್ಕಾರಿ ಶಾಲೆಯತ್ತ ಮಕ್ಕಳ ವರ್ಗಾವಣೆ ವಿಚಾರವಾಗಿ ಪ್ರತಿಕ್ರಿಯಿಸಿ, ರಾಜ್ಯದಲ್ಲಿ ಸಕಾರಾತ್ಮಕ ಬೆಳವಣಿಗೆ ಆಗುತ್ತಿದೆ. ಸರ್ಕಾರಿ ಶಾಲೆಯತ್ತ ಪೋಷಕರು, ಮಕ್ಕಳನ್ನು ದಾಖಲಾತಿ ಮಾಡುತ್ತಿದ್ದಾರೆ. ಎಷ್ಟೇ ಮಕ್ಕಳು ಬಂದರು ಅವರಿಗೆ ಸೂಕ್ತ ವ್ಯವಸ್ಥೆ ಕಲ್ಪಿಸುತ್ತೇವೆ. ಖಾಸಗಿ ಶಾಲೆಯಿಂದ ಟಿಸಿ ಕೊಡದಿದ್ರೆ ಬಿಇಒಗೆ ದೂರು ನೀಡಬಹುದು ಎಂದರು.

ಹೋದಲೆಲ್ಲ ಶಾಲೆ ಯಾವಾಗ ಶುರುವಾಗುತ್ತೆ ಎಂದು ಮಕ್ಕಳು ಕೇಳುತ್ತಿದ್ದಾರೆ. ಆದರೆ ಪೋಷಕರು ಮಾತ್ರ ಸಾಕಷ್ಟು ಆತಂಕದಲ್ಲಿ ಇದ್ದಾರೆ. ಇದನ್ನು ನಿವಾರಿಸುವ ಕೆಲಸ ನಮ್ಮ‌ ಇಲಾಖೆ ಮಾಡಲಿದೆ ಎಂದು ತಿಳಿಸಿದರು.

- Advertisement -

Related news

error: Content is protected !!