Tuesday, April 20, 2021
spot_imgspot_img
spot_imgspot_img

ಸೆಪ್ಟೆಂಬರ್ ಅಂತ್ಯದವರೆಗೂ ಶಾಲಾ-ಕಾಲೇಜಿಗೆ ವಿದ್ಯಾರ್ಥಿಗಳ ಭೇಟಿಗೆ ಅವಕಾಶವಿಲ್ಲ ! ಶಿಕ್ಷಣ ಇಲಾಖೆ ಮಹತ್ವದ ಆದೇಶ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೊಂಕು ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಸೆಪ್ಟೆಂಬರ್ ಅಂತ್ಯದವರೆಗೂ ಪ್ರೌಢ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳ ವಿದ್ಯಾರ್ಥಿಗಳು ಶಾಲಾ ಅಥವಾ ಕಾಲೇಜಿಗೆ ಭೇಟಿ ನೀಡಲು ಅನುಮತಿಯಿಲ್ಲ ಎಂದು ಸರ್ಕಾರದ ಪ್ರಧಾನ ಕಾರ್ಯದರ್ಶಿ ಎಸ್. ಆರ್ ಉಮಾ ಶಂಕರ್ ತಿಳಿಸಿದ್ದಾರೆ.

ಕೇಂದ್ರ ಸರಕಾರದ ಆದೇಶದ ಪ್ರಕಾರ 9, 10, 11, 12ನೇ ತರಗತಿ ವಿದ್ಯಾರ್ಥಿಗಳಿಗೆ ಸೆ. 21ರಿಂದ ಶಾಲೆಗೆ ಹೋಗಿ ಶಿಕ್ಷಕರ ಬಳಿ ಅನುಮಾನಗಳನ್ನು ಬಗೆಹರಿಸಿಕೊಳ್ಳುವ ಅವಕಾಶ ಇತ್ತು.ಆದರೆ ರಾಜ್ಯದಲ್ಲಿ ಕರೊನಾ ಪ್ರಕರಣ ಹೆಚ್ಚಾಗುತ್ತಿರುವುದರಿಂದ ಶಾಲೆ ತೆರೆಯಲು ಅವಕಾಶ ನೀಡದಿರಲು ಸಾಧ್ಯವಿಲ್ಲವೆಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಪರಿಸ್ಥಿಯ ಅವಲೋಕನೆಯ ನಂತರ ಮುಂದಿನ ತೀರ್ಮಾನಗಳನ್ನು ತೆಗೆದುಕೊಳ್ಳುವುದಾಗಿ ಸೂಚನೆ ನೀಡಿದೆ. ಕೇಂದ್ರ ಸರ್ಕಾರದ ಮಾರ್ಗಸೂಚಿಯ ಪ್ರಕಾರ ಕಂಟೇನ್ಮೆಂಟ್ ವಲಯ ಹೊರತುಪಡಿಸಿ 9ರಿಂದ 12ನೇ ತರಗತಿಗಳನ್ನು ತೆರೆದು ವಿದ್ಯಾರ್ಥಿಗಳ ಸಂದೇಶ ಪರಿಹಾರಕ್ಕಾಗಿ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು.

- Advertisement -

MOST POPULAR

HOT NEWS

Related news

error: Content is protected !!