Friday, June 19, 2026
spot_imgspot_img
spot_imgspot_img

ಉಪ್ಪಿನಂಗಡಿ: ಶಿರಾಡಿ ಘಾಟ್‌ನಲ್ಲಿ ಸರಣಿ ಅಪಘಾತ

- Advertisement -
- Advertisement -

ಉಪ್ಪಿನಂಗಡಿ : ಐರಾವತ ಬಸ್ಸು , ಗೂಡ್ಸ್‌ ಟೆಂಪೋ ಹಾಗೂ ರಾಜಹಂಸ ಬಸ್ಸುಗಳ ನಡುವೆ ಸರಣಿ ಅಪಘಾತ ನಡೆದ ಘಟನೆ ಉಪ್ಪಿನಂಗಡಿ ಸಮೀಪದ ಶಿರಾಡಿ ಗ್ರಾಮದ ಗುಂಡ್ಯ ಬಳಿ ನಡೆದಿದೆ.

ಪುತ್ತೂರಿನಿಂದ ಬೆಂಗಳೂರಿಗೆ ತೆರಳುತ್ತಿದ್ದ ಐರಾವತ ಬಸ್ ಗೂಡ್ಸ್‌ ಟೆಂಪೋವನ್ನು ಹಿಂದಿಕ್ಕಲು ಯತ್ನಿಸಿದೆ. ಈ ವೇಳೆ ಟೆಂಪೋ ಚಾಲಕ ನಿಯಂತ್ರಣ ಕಳೆದುಕೊಂಡು ಎದುರುಗಡೆಯಿಂದ ಬರುತ್ತಿದ್ದ ರಾಜಹಂಸಕ್ಕೆ ಢಿಕ್ಕಿ ಹೊಡೆದು ಹೆದ್ದಾರಿ ಬದಿಯ ಹಳ್ಳಕ್ಕೆ ಬಿದ್ದಿದೆ. ಇದೇ ಸಮಯದಲ್ಲಿ ರಾಜಹಂಸ ಬಸ್ಸಿಗೆ ಐರಾವತ ಬಸ್ಸು ಢಿಕ್ಕಿ ಹೊಡೆದು ಹೆದ್ದಾರಿಗೆ ಅಡ್ಡಲಾಗಿ ನಿಂತಿದ್ದು, ಹೆದ್ದಾರಿ ಸಂಚಾರ ಒಂದು ಗಂಟೆಗಳ ಕಾಲ ಸ್ಥಗಿತವಾಗಿತ್ತು.

ಅದೃಷ್ಟವಶಾತ್‌ ಅವಘಡದಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಆದರೆ ಐರಾವತ ಬಸ್ ಚಾಲಕ ಸೇರಿ ಕೆಲ ಮಂದಿ ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದುಬಂದಿದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!