Saturday, June 28, 2025
spot_imgspot_img
spot_imgspot_img

ಬಂಟ್ವಾಳ : ಎರಡು ದ್ವಿಚಕ್ರ ವಾಹನ ಹಾಗೂ ಪಿಕಪ್ ನಡುವೆ ಸರಣಿ ಅಪಘಾತ : ಇಬ್ಬರಿಗೆ ಗಾಯ

- Advertisement -
- Advertisement -

ಬಂಟ್ವಾಳ: ಎರಡು ಬೈಕ್ ಹಾಗೂ ಪಿಕಪ್ ವಾಹನಗಳ ನಡುವೆ ಸರಣಿ ಅಪಘಾತ ನಡೆದಿದ್ದು, ಬೈಕ್ ಸವಾರರಿಬ್ಬರು ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಬಂಟ್ವಾಳ ತಾಲೂಕಿನ ಕಾವಳಪಡೂರು ಗ್ರಾಮದ ವಗ್ಗ ಎಂಬಲ್ಲಿ ಬಿಸಿರೋಡು – ಕಡೂರು ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ.

ಗಾಯಾಳುಗಳನ್ನು ಗುಣವಂತ ಮತ್ತು ಶಮೀರ್ ಎಂದು ಗುರುತಿಸಲಾಗಿದೆ.

ಬೆಳ್ತಂಗಡಿ ‌ಕಡೆಯಿಂದ ಬರುತ್ತಿದ್ದ ಬೈಕ್ ಸವಾರ ಗುಣವಂತ ಎಂಬವರು ಬಿಸಿರೋಡು ‌ಕಡೆಯಿಂದ ಬರುತ್ತಿದ್ದ ಪಿಕಪ್ ವಾಹನಕ್ಕೆ ಎದುರಿನಿಂದ ಡಿಕ್ಕಿ ಹೊಡೆದಿದ್ದಾರೆ. ಇದೇ ವೇಳೆ ಪಿಕಪ್ ವಾಹನದ ಹಿಂಬದಿಯಿಂದ ಬರುತ್ತಿದ್ದ ಬೈಕ್ ಸವಾರ ಹಿಂಬದಿಯಿಂದ ಡಿಕ್ಕಿ ಹೊಡೆದಿದ್ದು, ಡಿಕ್ಕಿಯ ರಭಸಕ್ಕೆ ಎರಡು ಬೈಕ್ ಸವಾರರು ರಸ್ತೆಗೆ ಎಸೆಯಲ್ಪಟ್ಟಿದು, ಗಾಯಗೊಂಡ ಇಬ್ಬರು ಸವಾರರನ್ನು,ಬಂಟ್ವಾಳ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಬಂಟ್ವಾಳ ಟ್ರಾಫಿಕ್ ಪೋಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!