Friday, September 18, 2026
spot_imgspot_img
spot_imgspot_img

ಉಡುಪಿ: 3 ವರ್ಷದ ಕಂದಮ್ಮನ ಮೇಲೆ ತೀವ್ರವಾಗಿ ಹಲ್ಲೆ : ಪ್ರಜ್ಞಾಹೀನ ಸ್ಥಿತಿಯಲ್ಲಿ ಮಗು

- Advertisement -
- Advertisement -

ಉಡುಪಿ: ಮೂರೂವರೆ ವರ್ಷದ ಮಗುವಿನ ಮೇಲೆ ತೀವ್ರವಾಗಿ ಹಲ್ಲೆ ಮಾಡಿರುವ ಘಟನೆ ಹೆಬ್ರಿ ತಾಲೂಕಿನ ಚಕ್ಕರಮಕ್ಕಿ ಶೇಡಿಮನೆ ಗ್ರಾಮದಲ್ಲಿ ವರದಿಯಾಗಿದೆ.

ಮೂರು ವರ್ಷದ ಪ್ರೇರಿತ್ ಹಲ್ಲೆಗೊಳಗಾದ ಮಗು ಎಂದು ತಿಳಿದು ಬಂದಿದೆ.

ಮಗುವಿನ ಮೇಲೆ ಹಲ್ಲೆ ಮಾಡಿದ್ದರಿಂದ ಮಗು ಸದ್ಯ ಪ್ರಜ್ಞಾಹೀನ ಸ್ಥಿತಿಯಲ್ಲಿದೆ. ಮೈ ಹುಷಾರಿಲ್ಲ ಎಂದು ಪ್ರೇರಿತ್‌ನ್ನು ಪೋಷಕರು ಗುರುವಾರ ಬೆಳಿಗ್ಗೆ ಉಡುಪಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು. ಪ್ರೇರಿತ್‌ಗೆ ಚಿಕತ್ಸೆ ನೀಡುವ ವೇಳೆ ವೈದ್ಯರು ಆತನ ಮೈ ಮೇಲಿನ ಗಾಯದ ಗುರುತುಗಳನ್ನು ಕಂಡಿದ್ದಾರೆ.
ಪ್ರಾಥಮಿಕ ಚಿಕಿತ್ಸೆ ನೀಡಿದ ವೈದ್ಯರು, ಹೆಚ್ಚಿನ ಚಿಕಿತ್ಸೆಗಾಗಿ ಪ್ರೇರಿತನ್ನು ಕೆಎಂಸಿ ಆಸ್ಪತ್ರೆಗೆ ಶಿಫ್ಟ್ ಮಾಡಿದ್ದಾರೆ. ಈ ವಿಚಾರವನ್ನು ವೈದ್ಯರು ಜಿಲ್ಲಾ ಆರೋಗ್ಯ ಇಲಾಖೆ ಅಧಿಕಾರಿಯ ಗಮನಕ್ಕೆ ತಂದಿದ್ದಾರೆ. ಬಳಿಕ, ಡಿಹೆಚ್‌ ಒ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ವಿಚಾರ ತಿಳಿಸಿದ್ದಾರೆ , ವಿಚಾರ ತಿಳಿದ ಕೂಡಲೇ ಜಿಲ್ಲಾ ಮಕ್ಕಳ ರಕ್ಷಣಾ ಘಟಕದವರು ಆಸ್ಪತ್ರೆಗೆ ಭೇಟಿ ನೀಡಿ, ವೈದ್ಯರಿಂದ ಮಾಹಿತಿ ಪಡೆದಿದ್ದಾರೆ ಎಂದು ತಿಳಿದು ಬಂದಿದೆ.

ಮಗುವಿನ ಮೇಲಾದ ಗಾಯದ ಬಗ್ಗೆ ಪ್ರೇರಿತ್ ತಾಯಿ ಪೂರ್ಣಪ್ರಿಯಾ ಸ್ಪಷ್ಟ ಮಾಹಿತಿ ನೀಡದೆ, ತಡವರಿಸಿದ್ದಾರೆ ಎಂದು ಹೇಳಲಾಗಿದೆ.
ಮಗುವಿನ ದೇಹದ ಮೇಲೆ ಗಾಯದ ಕಲೆ ಇದೆ. ಮೇಲ್ನೋಟಕ್ಕೆ ಗಂಭೀರವಾಗಿ ಹಲ್ಲೆ ಮಾಡಿರುವುದು ಗೊತ್ತಾಗುತ್ತಿದೆ. ಜಿಲ್ಲಾ ಆರೋಗ್ಯಾಧಿಕಾರಿ ನೀಡಿದ ಮಾಹಿತಿಯಂತೆ ಆಸ್ಪತ್ರೆಗೆ ಭೇಟಿ ನೀಡಿದ್ದೇವೆ. ಮಗುವಿನ ಆರೋಗ್ಯ ವಿಚಾರಿಸಿ ವರದಿ ಪಡೆದಿದ್ದೇವೆ. ಸದ್ಯ ಮಗುವಿಗೆ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಳ್ಳುತ್ತಿದೆ. ಮಗು ಚೇತರಿಸಿಕೊಂಡ ಬಳಿಕ ಹೇಳಿಕೆ ಪಡೆಯಲಿದ್ದೇವೆ ಎಂದು ಮಕ್ಕಳ ರಕ್ಷಣಾಧಿಕಾರಿ ನಾಗರತ್ನ ನಾಯಕ್ ತಿಳಿಸಿದ್ದಾರೆ.
ಈ ಕುರಿತು ಅಮಾವಾಸ್ಯೆಬೈಲು ಪೋಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಪ್ರಕರಣದ ತನಿಖೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!