Sunday, April 28, 2024
spot_imgspot_img
spot_imgspot_img

ವಸತಿ ಶಾಲೆಯ ಹೆಣ್ಣು ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ; ಮೂವರ ಬಂಧನ

- Advertisement -G L Acharya panikkar
- Advertisement -

ವಸತಿ ಶಾಲೆಯ ಹೆಣ್ಣುಮಕ್ಕಳನ್ನು ಪ್ರಜ್ಞೆ ತಪ್ಪಿಸಿ ಲೈಂಗಿಕವಾಗಿ ಬಳಸಿಕೊಂಡ ಆರೋಪದ ಮೇಲೆ ಪೋಕ್ಸೋ ಪ್ರಕರಣದಡಿಯಲ್ಲಿ ಮೂವರನ್ನು ಬಂಧಿಸಿದ ಘಟನೆ ನಡೆದಿದೆ.

ಕಾಫಿನಾಡು ಚಿಕ್ಕಮಗಳೂರಿನಲ್ಲಿ ಸರ್ಕಾರಿ ಅಧಿಕಾರಿಯಿಂದಲೇ ಅಮಾಯಕ ಹೆಣ್ಣು ಮಕ್ಕಳನ್ನು ಲೈಂಗಿಕವಾಗಿ ಬಳಸಿಕೊಳ್ಳುವ ಕ್ರೂರ ಕೃತ್ಯ ನಡೆದಿದೆ. ವಸತಿ ಶಾಲೆ ವಿದ್ಯಾರ್ಥಿನಿಯರಿಗೆ ಪ್ಯಾರಾ ನರ್ಸಿಂಗ್ ಕೋರ್ಸ್ ಹೆಸರಲ್ಲಿ ಲೈಂಗಿಕ ದೌರ್ಜನ್ಯ ನಡೆಸಲಾಗಿದೆ.

ಚಿಕ್ಕಮಗಳೂರು ಕಡೂರು ಪೊಲೀಸ್ ಠಾಣೆ ವ್ಯಾಪ್ತಿಯ ಶಾಲೆಯೊಂದರಲ್ಲಿ ಈ ಘಟನೆ ನಡೆದಿದ್ದು, ಘಟನೆ ಸಂಬಂಧ ಮೂವರನ್ನು ಕಡೂರು ಪೊಲೀಸರು ಬಂಧಿಸಿದ್ದಾರೆ. ವಸತಿ ಶಾಲೆಯ ಡಿ. ದರ್ಜೆ ನೌಕರ ಸುರೇಶ್, ಶುಶ್ರೂಷಕಿ ಚಂದನ ಹಾಗೂ ಮಕ್ಕಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ನರ್ಸ್ ಪ್ರಿಯಕರ ವಿನಯ್ ಎಂಬವರನ್ನು ಬಂಧಿಸಲಾಗಿದೆ.

ವಿದ್ಯಾರ್ಥಿನಿಯರಿಗೆ ಅಮಲು ಬರೆಸುವ ಔಷಧಿ ನೀಡಿ ಲೈಂಗಿಕ ದೌರ್ಜನ್ಯ ಎಸಗಲಾಗುತ್ತಿತ್ತು ಎಂದು ತಿಳಿದುಬಂದಿದೆ. ಆರೋಪಿಗಳು ವಸತಿ ಶಾಲೆಯ ಹಲವು ಮಕ್ಕಳನ್ನು ಬಳಸಿಕೊಂಡಿರುವ ಅನುಮಾನವಿದೆ. ತಿಂಗಳುಗಳಿಂದ ಈ ಕೃತ್ಯ ನಡೆಯುತ್ತಿತ್ತು ಎಂದು ಪೊಲೀಸರ ತನಿಖೆಯಿಂದ ಬಯಲಾಗಿದೆ.

ಸುರೇಶ್ ಪ್ಯಾರಾ ಮೆಡಿಕಲ್ ಕೋರ್ಸ್‌ ಕೊಡಿಸುತ್ತೇನೆ ಎಂದು ವಿದ್ಯಾರ್ಥಿನಿಯರನ್ನು ಪುಸಲಾಯಿಸುತ್ತಿದ್ದ. ಪರೀಕ್ಷೆಯಲ್ಲಿ ಪಾಸಾದರೆ ಕೆಲಸ ಸಿಗುತ್ತದೆ ಎಂದು ನಂಬಿಸುತ್ತಿದ್ದ. ಒಪ್ಪಿದ ಮಕ್ಕಳ ಪೋಷಕರನ್ನು ನಂಬಿಸಿ ವಿದ್ಯಾರ್ಥಿನಿಯರನ್ನು ಚಂದನಾ ಬಳಿ ಕಳಿಸುತ್ತಿದ್ದ. ಚಂದನಾ ಆರೋಗ್ಯ ಕೇಂದ್ರಕ್ಕೆ ಬರುವ ವಿದ್ಯಾರ್ಥಿನಿಯರನ್ನು ಅಲ್ಲೇ ಉಳಿಸಿಕೊಳ್ಳುತ್ತಿದ್ದಳು. ಕಾಫಿ- ಟೀಯಲ್ಲಿ ಮತ್ತು ಬರುವ ಔಷಧಿ ಬೆರೆಸಿ ವಿದ್ಯಾರ್ಥಿನಿಯರಿಗೆ ನೀಡುತ್ತಿದ್ದಳು. ಅರೆಪ್ರಜ್ಞಾವಸ್ಥೆಯಲ್ಲಿರುತ್ತಿದ್ದ ಮಕ್ಕಳ ಮೇಲೆ ಚಂದನಾ ಲವರ್ ವಿನಯ್ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ತಿಳಿದುಬಂದಿದೆ. ಆರೋಪಿಗಳಿಗೆ ಸೂಕ್ತ ಶಿಕ್ಷೆ ನೀಡಲು ಪೋಷಕರು ಒತ್ತಾಯಿಸಿದ್ದಾರೆ.

- Advertisement -

Related news

error: Content is protected !!