Friday, April 19, 2024
spot_imgspot_img
spot_imgspot_img

ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮಂಡಲ ಪೂಜೆ ಭಕ್ತರ ಪ್ರವೇಶದ ಬಗ್ಗೆ- ಇಂದು ಉನ್ನತ ಮಟ್ಟದ ಸಭೆ

- Advertisement -G L Acharya panikkar
- Advertisement -

ತಿರುವನಂತಪುರಂ(ಅ.28): ಪ್ರಸಿದ್ದ ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಮಂಡಲ ಪೂಜೆ ವೇಳೆ ಎಷ್ಟು ಮಂದಿ ಭಕ್ತರಿಗೆ ಪ್ರವೇಶ ನೀಡಬೇಕು ಎಂಬ ಬಗ್ಗೆ ಚರ್ಚಿಸಲುನಡೆಯಲಿದೆ. ತುಲಾಮಾಸದ ಪೂಜೆ ವೇಳೆ ಪ್ರತಿದಿನ ಕೇವಲ 250 ಭಕ್ತರಿಗೆ ದೇವಸ್ಥಾನ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿತ್ತು.

ಕೇರಳ ಪೊಲೀಸ್ ಇಲಾಖೆಯ ವೆಬ್ ಸೈಟ್ ನಲ್ಲಿ ಹೆಸರು ನೋಂದಾಯಿಸಿದ್ದ ಭಕ್ತರಿಗೆ ಮಾತ್ರ ಅವಕಾಶ ನೀಡಲಾಗಿತ್ತು. ವರ್ಚುವಲ್ ಕ್ಯೂ ಪದ್ದತಿ ಅನುಸರಿಸಲಾಗಿತ್ತು. ಇದರಿಂದ ದೇವಸ್ಥಾನದ ಆದಾಯ ಗಣನೀಯವಾಗಿ ಕುಸಿದಿದೆ. ಮಂಡಲ ಮತ್ತು ಮಕರ ವಿಳಕ್ ಸಂದರ್ಭದಲ್ಲಿ ಲಕ್ಷಾಂತರ ಅಯ್ಯಪ್ಪ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡುತ್ತಿದ್ದಾರೆ. ಮಂಡಲ ಪೂಜೆ ವೇಳೆ ಪ್ರತಿದಿನ ಕನಿಷ್ಟ 10000 ಭಕ್ತರಿಗೆ ಅವಕಾಶ ನೀಡಬೇಕು ಎಂದು ದೇವಸ್ಥಾನದ ಆಡಳಿತ ಮಂಡಳಿ ರಾಜ್ಯ ಸರ್ಕಾರಕ್ಕೆ ಮನವಿ ಮಾಡಿದೆ.

- Advertisement -

Related news

error: Content is protected !!