- Advertisement -
- Advertisement -



ತಿರುವನಂತಪುರ: ಮಹಿಳೆಯರ ಶಬರಿಮಲೆ ದೇವಾಸ್ಥಾನ ಪ್ರವೇಶದ ಕುರಿತು ಅಸ್ತಿತ್ವದಲ್ಲಿರುವ ಸಂಪ್ರದಾಯಗಳನ್ನು ಸಂರಕ್ಷಿಸಲು ತಿರುವಾಂಕೂರು ದೇವಸ್ವಂ ಮಂಡಳಿ ಸುಪ್ರೀಂ ಕೋರ್ಟ್ನಲ್ಲಿ ಅಫಿಡವಿಟ್ ಸಲ್ಲಿಸಲಿದೆ.

10ರಿಂದ 50 ವರ್ಷದ ಒಳಗಿನ ಮಹಿಳೆಯರ ಪ್ರವೇಶ ನಿಷೇಧವನ್ನು ಮುಂದುವರಿಸಬೇಕು ಎಂದು ಸೋಮವಾರ ನಡೆದ ಆಡಳಿತ ಮಂಡಳಿಯ ಸಭೆಯಲ್ಲಿ ನಿರ್ಧರಿಸಲಾಗಿದೆ.ಈ ಕುರಿತು ಆಡಳಿತ ಮಂಡಳಿ ಸುಪ್ರೀಂ ಕೋರ್ಟ್ಗೆ ಅಫಿಡವಿಟ್ ಸಲ್ಲಿಸಲಿದೆ ಎಂದು ಆಡಳಿತ ಮಂಡಳಿಯ ಅಧ್ಯಕ್ಷ ಕೆ. ಜಯ ಕುಮಾರ್ ಸೋಮವಾರ ತಿಳಿಸಿದ್ದಾರೆ.ಋತುಸ್ರಾವವಾಗುವ ಮಹಿಳೆಯರಿಗೆ ಕೂಡ ಶಬರಿಮಲೆ ದೇವಸ್ಥಾನ ಪ್ರವೇಶಿಸುವ ಹಕ್ಕಿದೆ ಎಂದು ಸುಪ್ರೀಂ ಕೋರ್ಟ್ 2018 ಸೆಪ್ಟೆಂಬರ್ನಲ್ಲಿ ತೀರ್ಪು ನೀಡಿತ್ತು.
- Advertisement -








