Saturday, April 20, 2024
spot_imgspot_img
spot_imgspot_img

ಬೆಳ್ತಂಗಡಿ: ಬ್ರೇಕ್ ಫೈಲ್ ಆಗಿ ಅರಣ್ಯಕ್ಕೆ ನುಗ್ಗಿದ ಶಬರಿಮಲೆ ಯಾತ್ರಿಕರ ಮಿನಿ ಬಸ್; ಇಬ್ಬರು ಗಂಭೀರ

- Advertisement -G L Acharya panikkar
- Advertisement -

ಬೆಳ್ತಂಗಡಿ: ನಿಯಂತ್ರಣ ತಪ್ಪಿದ ಮಿನಿ‌ ಬಸ್ಸೊಂದು ಅಪಘಾತಕ್ಕೊಳಗಾಗಿ ಹಲವರು ಗಾಯ ಗೊಂಡಿರುವ ಘಟನೆ ಉಳ್ಳಾಲ್ತಿ ಕಟ್ಟೆ ಬಳಿ ನಡೆದಿದೆ.

ಶಬರಿಮಲೆ ಯಾತ್ರೆಗೆ ಹೊರಟ್ಟಿದ್ದ ಬಳ್ಳಾರಿಯ ಜಿಲ್ಲೆಯ ಕೂಡ್ಲೂಗಿ ತಾಲೂಕಿನ 21 ಜನರು ಮಿನಿ ಬಸ್ ನಲ್ಲಿ‌ ಚಾರ್ಮಾಡಿ ಘಾಟ್ ಮೂಲಕ ಶಬರಿಮಲೆಗೆ ಪ್ರಯಾಣ ಮಾಡುವಾಗ ಇಂದು ಬೆಳಗ್ಗೆ ಬೆಳ್ತಂಗಡಿ ತಾಲೂಕಿನ ಮುಂಡಾಜೆ ಗ್ರಾಮದ ಕಾಪು ಚಡವು ಉಳ್ಳಾಲ್ತಿ ಕಟ್ಟೆ ಬಳಿ ನಿಯಂತ್ರಣ ಬ್ರೇಕ್ ಫೈಲ್ ಅಗಿ ಅರಣ್ಯಕ್ಕೆ ಚಲಿಸಿ ಅಪಘಾತ ಸಂಬಂಧಿಸಿದೆ ಎನ್ನಲಾಗಿದೆ.

ಈ ಪೈಕಿ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ ಎಂದು ಆರಂಭಿಕ ಮಾಹಿತಿ ಬಂದಿದೆ. ಗಾಯಾಳುಗಳನ್ನು ಶಶಿ, ಜಲಾಧರ, ರಘು, ಬಸವರಾಜ್ ಮತ್ತು ಲೋಕ ಎಂದು ಗುರುತಿಸಲಾಗಿದೆ. ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಅಪಘಾತ ನಡೆದ ಜಾಗ ಇಳಿಜಾರಾಗಿದ್ದು, ವಾಹನದ ಬ್ರೇಕ್ ಕೈ ಕೊಟ್ಟಿದೆ ಎಂದು ತಿಳಿದೊಡನೆಯೇ ಅದರ ಚಾಲಕ ಸಮಯಪ್ರಜ್ಞೆ ಮೆರೆದಿದ್ದು ವಾಹನವನ್ನು ರಸ್ತೆ ಪಕ್ಕದ ಪೊದೆಯ ಕಡೆಗೆ ಚಲಿಸುವಂತೆ ಮಾಡಿ ನಿಯಂತ್ರಣಕ್ಕೆ ತಂದಿದ್ದಾರೆ. ಅಪಘಾತ ನಡೆದ ಸ್ಥಳದಲ್ಲಿ ಒಂದು ಕಡೆ ಆಳ ಕಂದಕ, ಇನ್ನೊಂದೆಡೆ ವಿದ್ಯುತ್ ಕಂಬ ಇದ್ದು ಸ್ವಲ್ಪ ಎಚ್ಚರ ತಪ್ಪಿದ್ದರೂ ಭಾರೀ ಅನಾಹುತ ಸಂಭವಿಸುವ ಸಾಧ್ಯತೆ ಇತ್ತು.

ಸ್ಥಳಕ್ಕೆ ಆರು ಆಂಬುಲೆನ್ಸ್ ಅಗಮಿಸಿದ್ದು, ಬೆಳ್ತಂಗಡಿ ಸಂಚಾರಿ ಪೊಲೀಸರು ಹಾಗೂ ಸ್ಥಳೀಯರು ದೌಡಾಯಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ.

- Advertisement -

Related news

error: Content is protected !!