Saturday, June 28, 2025
spot_imgspot_img
spot_imgspot_img

ಅವಹೇಳನಕಾರಿ ಪೋಸ್ಟ್ ಟ್ವಿಟ್ ಮಾಡಿದ್ದಕ್ಕೆ ಶಕುಂತಲಾ ನಟರಾಜ್ ತಪ್ಪೊಪ್ಪಿಗೆ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಕುಟುಂಬದ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ್ದ ಬಿಜೆಪಿ ಕಾರ್ಯಕರ್ತೆ ಶಕುಂತಲಾ ನಟರಾಜ್ ಅವರಿಗೆ ಸ್ಟೇಷನ್ ಜಾಮೀನು ಲಭಿಸಿದೆ.

ಬೆಂಗಳೂರಿನ ಪೊಲೀಸರು ವಶಕ್ಕೆ ಪಡೆದು, ವಿಚಾರಣೆ ನಡೆಸಿದ ಬಳಿಕ ಶಕುಂತಲಾ ನಟರಾಜ್ ಅವರನ್ನು ಠಾಣಾ ಜಾಮೀನು ನೀಡಿ ಬಿಡುಗಡೆಗೊಳಿಸಿದ್ದಾರೆ ಎಂದು ತಿಳಿದುಬಂದಿದೆ.

ಉಡುಪಿ ಕಾಲೇಜಿನ ಶೌಚಾಲಯದಲ್ಲಿ ಚಿತ್ರೀಕರಣದ ಬಗ್ಗೆ ಟ್ವಿಟ್ ಮಾಡಿದ್ದ ಶಕುಂತಲಾ, “ಮುಸ್ಲಿಂ ಯುವತಿಯರು ಟಾಯ್ಲೆಟ್ ನಲ್ಲಿ ಕ್ಯಾಮೆರಾ ಇಟ್ಟು ಹಿಂದೂ ಹೆಣ್ಣುಮಕ್ಕಳ ವಿಡಿಯೋ ಮಾಡಿದ್ದು ಕಾಂಗ್ರೆಸ್‌ನವರ ಪ್ರಕಾರ ಮಕ್ಕಳಾಟವಂತೆ. ಸಿದ್ದರಾಮಯ್ಯನವರ ಸೊಸೆ ಅಥವಾ ಹೆಂಡ್ತಿ ವಿಡಿಯೋವನ್ನು ಇದೇ ರೀತಿ ಮಾಡಿದ್ದಿದ್ರೆ ಅದನ್ನು ಮಕ್ಕಳಾಟ ಅಂತ ಒಕ್ಕೋತೀರಾ?” ಎಂದು  ಟ್ವಿಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹನುಮಂತರಾಯ ಎಂಬವರು ಹೈಗೌಂಡ್ಸ್ ಪೊಲೀಸ್ ಠಾಣೆಯಲ್ಲಿ ಕಾನೂನು ಕ್ರಮಕ್ಕೆ ಆಗ್ರಹಿಸಿ ಜು.27ರಂದು ದೂರು ನೀಡಿದ್ದ ಹಿನ್ನೆಲೆಯಲ್ಲಿ ಶಕುಂತಲಾ ವಿರುದ್ಧ ಎಫ್‌ಐಆರ್ ದಾಖಲಿಸಿಕೊಳ್ಳಲಾಗಿತ್ತು.ಶಕುಂತಲಾ ನಟರಾಜ್ ಅವರನ್ನು ಇಂದು ಬೆಳಿಗ್ಗೆ ಪೊಲೀಸರು ವಶಕ್ಕೆ ಪಡೆದು ಬಳಿಕ ಸ್ಟೇಷನ್ ಜಾಮೀನಿನ ಮೇಲೆ ಮನೆಗೆ ಕಳುಹಿಸಿದ್ದಾರೆ.

‘ಸಿಎಂ ಕುಟುಂಬದ ಮಹಿಳೆಯರ ಬಗ್ಗೆ ವೈಯಕ್ತಿಕವಾಗಿ ಆ ರೀತಿ ಸೋಷಿಯಲ್ ಮೀಡಿಯಾದಲ್ಲಿ ಬರೆದಿರುವುದು ತಪ್ಪು ಮುಂದೆ ಆ ರೀತಿ ನಡೆದುಕೊಳ್ಳುವುದಿಲ್ಲ’ ಎಂದು ಠಾಣೆಯಲ್ಲಿ ಶಕುಂತಲಾ ನಟರಾಜ್ ತನ್ನೊಪ್ಪಿಗೆ ಪತ್ರ ಬರೆದಿದ್ದಾರೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!