- Advertisement -
- Advertisement -
ಮಂಗಳೂರು:ಆಗಸ್ಟ್ 5 ರಂದು ಅಯೋಧ್ಯೆಯಲ್ಲಿ ನಡೆಯಲಿರುವ ಶ್ರೀರಾಮ ಮಂದಿರದ ಭೂಮಿ ಪೂಜೆಯು ಒಂದು ರಾಷ್ಟ್ರೀಯ ಕಾರ್ಯಕ್ರಮವಾಗಿದ್ದು ನಮ್ಮ ದೇಶದ ಪ್ರಧಾನ ಮಂತ್ರಿಗಳೇ ಖುದ್ದು ಭಾಗವಹಿಸುತ್ತಿದ್ದಾರೆ. ರಾಷ್ಟ್ರೀಯ ಕಾರ್ಯಕ್ರಮ ನಡೆಯುವ ಆ ದಿನವನ್ನು ಸಂಭ್ರಮಿಸಲು ಇಡೀ ದೇಶದ ಜನ ಸಿದ್ಧತೆ ನಡೆಸಿದ್ದು ಮಂಗಳೂರು ನಗರದಲ್ಲಿಯೂ ದೇವಸ್ಥಾನ, ಮಂದಿರಗಳಲ್ಲಿ ಪೂಜೆ ಪುರಸ್ಕಾರ ಮತ್ತು ಭಜನೆ ಹಾಗೂ ತಮ್ಮ ತಮ್ಮ ಮನೆಗಳಲ್ಲಿ ದೀಪ ಬೆಳಗಿಸುವ ಮುಖಾಂತರ ಆಚರಿಸಲು ಮಂಗಳೂರಿನ ಜನತೆ ಸಿದ್ಧತೆ ನಡೆಸಿರುತ್ತಾರೆ.
ಇಂತಹ ಸಂದರ್ಭದಲ್ಲಿ ಪೊಲೀಸ್ ಇಲಾಖೆ ಏಕಾಏಕಿ ಮಂಗಳೂರು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಿದ್ದು ಜನರಲ್ಲಿ ನೋವು ಮತ್ತು ಆತಂಕವನ್ನು ಮೂಡಿಸಿದೆ. ಜಿಲ್ಲಾಡಳಿತದ ಈ ಕ್ರಮವನ್ನು ವಿಶ್ವ ಹಿಂದೂ ಪರಿಷತ್ ತೀವ್ರವಾಗಿ ಖಂಡಿಸುತ್ತದೆ ಹಾಗೂ ಸೆಕ್ಷನ್ 144 ಅನ್ನು ಈ ಕೂಡಲೇ ಹಿಂಪಡೆಯಬೇಕೆಂದು ಆಗ್ರಹಿಸುತ್ತದೆ ಎಂದು ವಿಹಿಂಪ ಮಂಗಳೂರು ವಿಭಾಗ ಕಾರ್ಯದರ್ಶಿ ಶರಣ್ ಪಂಪವೆಲ್ ರವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
- Advertisement -