Saturday, April 20, 2024
spot_imgspot_img
spot_imgspot_img

1 ರಿಂದ 5ನೇ ತರಗತಿಗಳನ್ನು ಪುನರಾರಂಭ ಚಿಂತನೆ: ಶನಿವಾರ ಹಾಗೂ ಭಾನುವಾರವೂ ತರಗತಿ ಇರುತ್ತೆ..!

- Advertisement -G L Acharya panikkar
- Advertisement -
driving

ಬೆಂಗಳೂರು: ರಾಜ್ಯದಲ್ಲಿ 1 ರಿಂದ 5ನೇ ತರಗತಿಗಳನ್ನು ಪುನರಾರಂಭ ಕುರಿತಂತೆ ಇನ್ನೆರಡು ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೊರೋನಾ ಕಾರಣದಿಂದಾಗಿ ಶಾಲೆ ತಡವಾಗಿ ಆರಂಭವಾಗುತ್ತಿರುವುದರಿ0ದ ಶೈಕ್ಷಣಿಕ ಪಠ್ಯಕ್ರಮ ಕುಂಠಿತಗೊ0ಡಿದೆ. ಹೀಗಾಗಿ ಶನಿವಾರ, ಭಾನುವಾರವೂ ತರಗತಿ ನಡೆಸುವ ಬಗ್ಗೆ ಚಿಂತನೆ ಇದೆ. ಪಠ್ಯ ಕ್ರಮ ಕಡಿತದ ಬಗ್ಗೆ ಯಾವುದೇ ನಿರ್ಧಾರ ಕೈಗೊಳ್ಳುವ ಯೋಚನೆ ಇಲ್ಲ ಎಂಬುದಾಗಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ತಿಳಿಸಿದ್ದಾರೆ.

ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಇನ್ನೆರಡು ದಿನಗಳಲ್ಲಿಯೇ 1 ರಿಂದ 5ನೇ ತರಗತಿ ಪುನರಾರಂಭ ಕುರಿತಂತೆ ಸಭೆ ನಡೆಯಲಿದೆ. ಆ ಸಭೆಯಲ್ಲಿ ತಜ್ಞರು, ಕೋವಿಡ್ ಉಸ್ತುವಾರಿಗಳು, ತಾಂತ್ರಿಕ ಸಲಹಾ ಸಮಿತಿಯ ಸದಸ್ಯರು ನೀಡುವಂತ ಸಲಹೆ ಆಧರಿಸಿ, ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.

ರಾಜ್ಯದಲ್ಲಿ ತಡವಾಗಿ ಶಾಲೆಗಳು ಆರಂಭವಾಗುತ್ತಿದ್ದರೂ ಪಠ್ಯ ಕ್ರಮ ಕಡಿತದ ಕುರಿತಂತೆ ಯಾವುದೇ ನಿರ್ಧಾರ ಕೈಗೊಳ್ಳುವಂತ ಚಿಂತನೆ ಇಲ್ಲ. ಪಠ್ಯ ಕ್ರಮ ಸರಿಯಾದ ಸಮಯಕ್ಕೆ ಮುಕ್ತಾಯಗೊಳಿಸೋದಕ್ಕಾಗಿ ಶನಿವಾರ ಹಾಗೂ ಭಾನುವಾರವೂ ತರಗತಿ ನಡೆಸೋ ಚಿಂತನೆಯಿದೆ. ಆ ಬಗ್ಗೆ ಶೀಘ್ರವೇ ಸಿಎಂ ನೇತೃತ್ವದಲ್ಲಿ ನಡೆಯಲಿರುವಂತ ಸಭೆಯಲ್ಲಿ ನಿರ್ಧಾರವನ್ನು ಪ್ರಕಟಿಸಲಾಗುತ್ತದೆ ಎಂದು ತಿಳಿಸಿದರು.

- Advertisement -

Related news

error: Content is protected !!