Monday, June 15, 2026
spot_imgspot_img
spot_imgspot_img

ಶಿಬಾಜೆ: ರಸ್ತೆಯ ಬದಿ ನಿಂತಿದ್ದ ವ್ಯಕ್ತಿಗೆ ಪಿಕಪ್‌ ಡಿಕ್ಕಿ; ಚಿಕಿತ್ಸೆ ಫಲಕಾರಿಯಾಗದೆ ಸಾವು..!

- Advertisement -
- Advertisement -

ಶಿಬಾಜೆ: ಪಿಕಪ್‌ ವಾಹನ ಹಿಮ್ಮುಖವಾಗಿ ಚಲಿಸಿ ವ್ಯಕ್ತಿಗೆ ಡಿಕ್ಕಿ ಹೊಡೆದು ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ಘಟನೆ ಶಿಬಾಜೆ ಗ್ರಾಮದ ತಂಬ್ಲಾಜೆಯಲ್ಲಿ ನಡೆದಿದೆ.

ಮೃತಪಟ್ಟ ವ್ಯಕ್ತಿ ರುಕ್ಮ ಮುಗೇರ ಎಂದು ಗುರುತಿಸಲಾಗಿದೆ.

ಶಿಬಾಜೆ ಬಳಿ ಪಿಕಪ್ ನಿಲ್ಲಿಸಿದಾಗ ರುಕ್ಮ ಮುಗೇರ ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದರು. ಅದರ ಚಾಲಕ ಜಯೇಶ್‌ ಅವರು ದುಡುಕುತನದಿಂದ ಹಿಮ್ಮುಖವಾಗಿ ಚಲಾಯಿಸಿ, ರಸ್ತೆಯ ಬದಿಯಲ್ಲಿ ನಿಂತುಕೊಂಡಿದ್ದ ರುಕ್ಮ ಮುಗೇರ ಅವರಿಗೆ ಢಿಕ್ಕಿ ಹೊಡೆದಿದೆ ಅಪಘಾತದ ಪರಿಣಾಮ, ರುಕ್ಮ ಮುಗೇರ ರಸ್ತೆಗೆ ಬಿದ್ದು ಗಂಭೀರವಾಗಿ ಗಾಯಗೊಂಡರು ತಕ್ಷಣ ಅವರಿಗೆ ಉಜಿರೆಯ ಎಸ್‌ಡಿಎಂ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ಕೊಡಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಸಾಗಿಸುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಉಪೇಂದ್ರ ಅವರು ನೀಡಿದ ದೂರಿನಂತೆ ಬೆಳ್ತಂಗಡಿ ಸಂಚಾರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -

Related news

error: Content is protected !!