- Advertisement -
- Advertisement -





ಶಿವಮೊಗ್ಗ: ರೈಲ್ವೆ ಗೂಡ್ಸ್ ಮೂಲಕ ಬರುವ ಗೊಬ್ಬರವನ್ನು ಸಾಗಾಣಿಕೆ ಮಾಡಲು ಸಜ್ಜಾಗಿ ನಿಂತಿದ್ದ ಲಾರಿಯಲ್ಲಿ ಇಂದು ಬೆಳಿಗ್ಗೆ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಶಿವಮೊಗ್ಗದಲ್ಲಿ ನಡೆದಿದೆ.
ಅಬಿದ್ ಎಂಬುವವರಿಗೆ ಸೇರಿದ ಎಸ್ ಕೆ ಪಿ ಹೆಸರಿನ ಲಾರಿ ಇದಾಗಿದ್ದು, ಮೊದಲು ಲಾರಿಯ ಕ್ಯಾಬಿನ್ ಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಕ್ಲೀನರ್ ತಕ್ಷಣವೇ ಎಚ್ಚೆತ್ತುಕೊಂಡು ಮಾಲೀಕರಿಗೆ ಮಾಹಿತಿ ನೀಡಿದ್ದು, ಪ್ರಾಥಮಿಕ ತನಿಖೆ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಈ ಅಗ್ನಿ ಅವಘಡ ಸಂಭವಿಸಿದೆ ಎಂದು ತಿಳಿದು ಬಂದಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ, ಲಾರಿಯ ಮುಂಭಾಗ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ.
ಮಾಹಿತಿ ತಿಳಿದ ತಕ್ಷಣ ಅಗ್ನಿಶಾಮಕ ದಳದ ಸಿಬ್ಬಂದಿಗಳು ಸತತ ಕಾರ್ಯಚರಣೆ ನಡೆಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇದರಿಂದಾಗಿ ಇನ್ಯಾವುದೇ ಅನಾಹುತಗಳು ಸಂಭವಿಸಿಲ್ಲ. ಘಟನೆಗೆ ಸಂಬಂಧಿಸಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರೆದಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








