Sunday, May 5, 2024
spot_imgspot_img
spot_imgspot_img

ಶಿವಮೊಗ್ಗ ಗಲಾಟೆ, ಠಾಣಾಧಿಕಾರಿ ಸೇರಿ ಮೂವರು ಪೊಲೀಸ್ ಕಾನ್ಸ್‌ಟೇಬಲ್ ಅಮಾನತು

- Advertisement -G L Acharya panikkar
- Advertisement -
vtv vitla

ಶಿವಮೊಗ್ಗ: ಈದ್​ ಮಿಲಾದ್ ಮೆರವಣಿಗೆ ವೇಳೆ ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಪ್ರಕರಣಕ್ಕೆ ಸಂಬಂಧಿಸಿ ಠಾಣಾಧಿಕಾರಿ ಹಾಗೂ ಮೂವರು ಕಾನ್ಸ್​ಟೇಬಲ್​​ಗಳು ಅಮಾನತುಗೊಳಿಸಲಾಗಿದೆ.

ಪೊಲೀಸ್ ಠಾಣಾಧಿಕಾರಿ ಅಭಯ ಪ್ರಕಾಶ್, ಕಾನ್ಸ್​ಟೇಬಲ್​ಗಳಾದ ಕಾಶಿನಾಥ್, ರಂಗನಾಥ್​ ಹಾಗೂ ಶಿವರಾಜ್ ಅವರನ್ನು ಶಿವಮೊಗ್ಗ ಎಸ್​ಪಿ ಜಿ.ಕೆ. ಮಿಥುನ್ ಕುಮಾರ್ ಸಲ್ಲಿಸಿದ​​ ವರದಿ ಆಧರಿಸಿ ಪೂರ್ವ ವಲಯ ಐಜಿಪಿ ತ್ಯಾಗರಾಜನ್ ಅವರು ಅಮಾನತು ಮಾಡಿ ಆದೇಶಿಸಿದ್ದಾರೆ.

ಅಕ್ಟೋಬರ್​ 1 ರಂದು ಶಿವಮೊಗ್ಗದ ರಾಗಿಗುಡ್ಡದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದು ಮಾತ್ರವಲ್ಲದೇ ಪೊಲೀಸರ ಮೇಲೂ ಹಲ್ಲೆಗೆ ಮುಂದಾಗಿದ್ದರು. ರಾಗಿಗುಡ್ಡದಲ್ಲಿ ಪೊಲೀಸರು ಗಲಾಟೆ ನಿಯಂತ್ರಿಸಲು ವಿಫಲವಾದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳು ನಿಷೇಧಾಜ್ಞೆ ಜಾರಿಗೊಳಿಸಬೇಕಾಯಿತು. ಇದರಿಂದ ಸಾರ್ವಜನಿಕರು ಸಾಕಷ್ಟು ಕಷ್ಟ ಅನುಭವಿಸಬೇಕಾಯಿತು. ಇಲ್ಲಿ ಪೊಲೀಸರು ಕರ್ತವ್ಯ ನಿರ್ವಹಿಸಲು ವಿಫಲವಾಗಿರುವುದು ಸ್ಪಷ್ಟವಾದ ಹಿನ್ನೆಲೆಯಲ್ಲಿ ಈ ಅಮಾನತು ಆದೇಶವನ್ನು ಹೊರಡಿಸಲಾಗಿದೆ ಎನ್ನಲಾಗಿದೆ.

- Advertisement -

Related news

error: Content is protected !!