Monday, June 8, 2026
spot_imgspot_img
spot_imgspot_img

ಶಿರ್ವ: ನಾಪತ್ತೆಯಾಗಿದ್ದ ಯುವತಿಯ ಶವ ಪಾಪನಾಶಿನಿ ನದಿಯಲ್ಲಿ ಪತ್ತೆ

- Advertisement -
- Advertisement -

ಶಿರ್ವ : ನಾಪತ್ತೆಯಾಗಿದ್ದ ಯುವತಿಯ ಮೃತದೇಹ ಶಿರ್ವ ಪೊಲೀಸ್‌ ಠಾಣಾ ವ್ಯಾಪ್ತಿಯ ಪಡುಬೆಳ್ಳೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಸಮೀಪದ ಸೇತುವೆಯ ಬಳಿ ಪಾಪನಾಶಿನಿ ನದಿಯ ಗುಂಡಿಯಲ್ಲಿ ಪತ್ತೆಯಾಗಿದೆ.

ಮೃತ ಯುವತಿಯನ್ನು ಮೂಡುಬೆಳ್ಳೆ ಕೊಂಗಿಬೈಲು ನಿವಾಸಿ ಸದಾಶಿವ ಪೂಜಾರಿ ಅವರ ಪುತ್ರಿ ವಿನಿತಾ (22) ಎಂದು ಗುರುತಿಸಲಾಗಿದೆ. ವಿನಿತಾ ಅಕ್ಟೋಬರ್ 9ರಂದು ಮಧ್ಯಾಹ್ನ 3 ಗಂಟೆಗೆ ತನ್ನ ಮನೆಯಿಂದ ಉಡುಪಿಗೆ ಹೋಗುತ್ತೇನೆ ಎಂದು ಹೋದವಳು ಮತ್ತೆ ವಾಪಾಸ್ ಮನೆ ಬಂದಿಲ್ಲ. ಈ ಹಿನ್ನಲೆ ಶಿರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿ.ಕಾಂ. ಪದವೀಧರೆಯಾಗಿದ್ದ ಆಕೆ ಉಡುಪಿ ಎಂಜಿಎಂ ಕಾಲೇಜ್‌ ಬಳಿಯ ಎಲೆಕ್ಟ್ರಿಕಲ್‌ ಬೈಕ್‌ ಶೋರೂಂನಲ್ಲಿ ಸುಮಾರು 4 ತಿಂಗಳಿನಿಂದ ಕೆಲಸ ಮಾಡಿಕೊಂಡಿದ್ದು, ವಾರದ ಹಿಂದೆ ಕೆಲಸಬಿಟ್ಟಿದ್ದರು. ಶಿರ್ವ ಪೊಲೀಸ್‌ ಠಾಣಾಧಿಕಾರಿ ಸಕ್ತಿವೇಲು ಮತ್ತು ಕ್ರೈಂ ವಿಭಾಗದ ಪಿಎಸ್‌ಐ ಅನಿಲ್‌ ಕುಮಾರ್‌ ಸ್ಥಳದಲ್ಲಿದ್ದು ತನಿಖೆ ಮುಂದುವರಿಸಿದ್ದಾರೆ.

- Advertisement -

Related news

error: Content is protected !!