Sunday, June 29, 2025
spot_imgspot_img
spot_imgspot_img

ಶಿರ್ವ: ಟಿಪ್ಪರ್-ಕಾರು ಮಧ್ಯೆ ಅಪಘಾತ; ಟಿಪ್ಪರ್ ಚಾಲಕ ಸ್ಥಳದಲ್ಲೇ ಸಾವು..!

- Advertisement -
- Advertisement -

ಶಿರ್ವ: ಟಿಪ್ಪರ್ ಹಾಗೂ ಕಾರಿನ ಮಧ್ಯೆ ನಡೆದ ಅಘಾತದಲ್ಲಿ ಟಿಪ್ಪರ್ ಚಾಲಕ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ಶಂಕರಪುರ ಸಮೀಪದ ಅರಸೀಕಟ್ಟೆ ದುರ್ಗಾ ನಗರದಲ್ಲಿ ನಡೆದಿದೆ.

ಮೃತಪಟ್ಟ ಟಿಪ್ಪರ್ ಚಾಲಕ ಕೊಕ್ಕರ್ಣೆ ನಿವಾಸಿ ಕೃಷ್ಣ ನಾಯ್ಕ (55) ಎಂದು ಗುರುತಿಸಲಾಗಿದೆ.

ಕಟಪಾಡಿ ಕಡೆಯಿಂದ ಶಿರ್ವ ಕಡೆಗೆ ಹೋಗುತ್ತಿದ್ದ ಕಾರಿಗೆ ಎದುರಿನಿಂದ ಬಂದ ಟಿಪ್ಪರ್ ಢಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಚಾಲಕನ ನಿಯಂತ್ರಣ ತಪ್ಪಿ ಟಿಪ್ಪರ್ ಪಲ್ಟಿಯಾಗಿದ್ದು, ಇದರ ಅಡಿಯಲ್ಲಿ ಸಿಲುಕಿದ ಚಾಲಕ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲಿಯೇ ಮೃತಪಟ್ಟರು ಎಂದು ತಿಳಿದುಬಂದಿದೆ. ಈ ಬಗ್ಗೆ ಶಿರ್ವ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!