Thursday, August 27, 2026
spot_imgspot_img
spot_imgspot_img

ಶಿಶಿಲ: ಪತ್ನಿ ಮತ್ತು ಮಗಳ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ ಪತಿ; ಆಸ್ಪತ್ರೆಗೆ ದಾಖಲು..!

- Advertisement -
- Advertisement -

ಶಿಶಿಲ: ವ್ಯಕ್ತಿಯೊಬ್ಬರು ತನ್ನ ಪತ್ನಿ ಮತ್ತು ಮಕ್ಕಳಿಗೆ ಮಾರಣಾಂತಿಕ ಹಲ್ಲೆ ಮಾಡಿದ ಪ್ರಕರಣ ಕೋಟೆ ಬಾಗಿಲು ಎಂಬಲ್ಲಿ ನಡೆದಿದೆ.

ಕೋಟೆ ಬಾಗಿಲು ನಿವಾಸಿ ಸುರೇಶ್ ಎಂಬವರು ತನ್ನ ಹೆಂಡತಿಯ ಮುಖದ ಭಾಗಕ್ಕೆ ಕಚ್ಚಿ ಮಾಂಸ ಹೊರತೆಗೆದು ಕಣ್ಣಿಗೆ ಕೂಡ ಕೋಲಿನಿಂದ ಹೊಡೆದು ಎಡ ಭಾಗದ ಕಣ್ಣಿಗೆ ಪೆಟ್ಟಾಗಿದೆ ಎನ್ನಲಾಗಿದೆ.

ಇನ್ನು ಮಗಳಿಗೆ ತಲೆಯಭಾಗಕ್ಕೆ ಹೊಡೆದಿದ್ದು ಪ್ರಾಣ ಭಯದಿಂದ ಇಬ್ಬರು ತಪ್ಪಿಸಿಕೊಂಡು ನೆರೆ ಹೊರೆಯವರ ಬಳಿ ಬಂದು ಸಹಾಯ ಕೇಳಿದ್ದಾರೆ ತಕ್ಷಣ ಸ್ಪಂದಿಸಿದ ಸ್ಥಳೀಯರು ಆಂಬ್ಯುಲೆನ್ಸ್ ಸಹಾಯದಿಂದ ಉಜಿರೆ ಆಸ್ಪತ್ರೆಗೆ ತಾಯಿ ಮತ್ತು ಮಗಳನ್ನು ದಾಖಲಿಸಿದ್ದಾರೆ.

ಧರ್ಮಸ್ಥಳ ಪೊಲೀಸರಿಗೆ ಈ ಪ್ರಕರಣದ ಕುರಿತು ಮಾಹಿತಿ ದೊರೆತಿದ್ದು, ಆಸ್ಪತ್ರೆಗೆ ತೆರಳಿ ಘಟನೆಯ ಕುರಿತು ಮಾಹಿತಿ ಪಡೆಯುತ್ತಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!