Monday, August 10, 2026
spot_imgspot_img
spot_imgspot_img

ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸುವುದಿಲ್ಲ- ಸಿಎಂ ಡಿ.ಕೆ.ಶಿವಕುಮಾರ್‌

- Advertisement -
- Advertisement -

ಬೆಂಗಳೂರು: ಯಾವುದೇ ಕಾರಣಕ್ಕೂ ರಾಮಲಿಂಗಾರೆಡ್ಡಿ ರಾಜೀನಾಮೆ ಅಂಗೀಕರಿಸಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಸ್ಪಷ್ಟಪಡಿಸಿದ್ದಾರೆ.

ರಾಮಲಿಂಗಾರೆಡ್ಡಿ ಅವರನ್ನು ಭೇಟಿಯಾಗಿ ಮಾತನಾಡಿದ್ದೇನೆ. ನಿನ್ನೆ ರಾತ್ರಿ ರಾಜೀನಾಮೆ ವಾಟ್ಸಪ್‌ ಮಾಡಿದ್ದಾರೆ. ನಾನು ಯಾವುದೇ ಕಾರಣಕ್ಕೂ ಅದನ್ನು ಅಕ್ಸೆಪ್ಟ್‌ ಮಾಡಲ್ಲ ಅಂತ ತಿಳಿಸಿದ್ದೀನೆಂದು ಸಿಎಂ ತಿಳಿಸಿದ್ದಾರೆ.

ಇತ್ತ ಕೆಪಿಸಿಸಿ ಅಧ್ಯಕ್ಷ ಬಿ.ಕೆ.ಹರಿಪ್ರಸಾದ್ ಅವರನ್ನು ಭೇಟಿ ಮಾಡಿ ರಾಮಲಿಂಗಾರೆಡ್ಡಿ ಮಾತನಾಡಿದ್ದಾರೆ. ಈ ಕುರಿತು ಪ್ರತಿಕ್ರಿಯಿಸಿರುವ ಹರಿಪ್ರಸಾದ್‌, ಗಂಭೀರವಾದ ಸಮಸ್ಯೆ ಏನಿಲ್ಲ. ಸಂವಹನದ ಕೊರತೆಯಾಗಿ ಮಿಸ್ ಅಂಡರ್‌ಸ್ಟ್ಯಾಂಡಿಂಗ್ ಆಗಿದೆ ಎಂದು ಹೇಳಿದ್ದಾರೆ.

ರಾಜ್ಯದ ಮುಖ್ಯಮಂತ್ರಿಯಾಗಿ ಜೂ.3 ರಂದು ಡಿ.ಕೆ.ಶಿವಕುಮಾರ್‌ ಪ್ರಮಾಣಚನ ಸ್ವೀಕರಿಸಿದರು. ಇವರ ಜೊತೆಗೆ ರಾಮಲಿಂಗಾರೆಡ್ಡಿ ಸೇರಿದಂತೆ 13 ಶಾಸಕರು ಸಚಿವರಾಗಿ ಪ್ರಮಾವಚನ ಸ್ವೀಕರಿಸಿದ್ದರು. ನಾನು ಕೇಳಿದ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂದು ರೆಡ್ಡಿ ತಿಳಿಸಿದ್ದಾರೆ ಎಂಬುದಾಗಿ ವರದಿಯಿಂದ ತಿಳಿದುಬಂದಿದೆ.

- Advertisement -

Related news

error: Content is protected !!