Friday, July 24, 2026
spot_imgspot_img
spot_imgspot_img

ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಅಪಘಾತ: ಓರ್ವ ಮಹಿಳೆ ಗಂಭೀರ..!

- Advertisement -
- Advertisement -

ಶಿವಮೊಗ್ಗ: ಖಾಸಗಿ ಬಸ್ ಮತ್ತು ಪೆಟ್ರೋಲ್ ಟ್ಯಾಂಕರ್ ನಡುವೆ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಬಸ್‌ನ ಮುಂಭಾಗ ಸಂಪೂರ್ಣವಾಗಿ ಜಖಂಗೊಂಡ ಘಟನೆ ರಿಪ್ಪನ್ ಪೇಟೆ ಸಮೀಪ ಕೋಡುರು ಬಳಿ ನಡೆದಿದೆ.

ಅಪಘಾತದಲ್ಲಿ ಬಸ್‌ ನಲ್ಲಿದ್ದ ವಿದ್ಯಾರ್ಥಿಗಳು ಸೇರಿ ಅನೇಕ ಪ್ರಯಾಣಿಕರಿಗೆ ಗಾಯಗಳಾಗಿದ್ದು, ಓರ್ವ ಮಹಿಳೆ ತೀವ್ರವಾಗಿ ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಎಲ್ಲರೂ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗಾಯಾಳುಗಳನ್ನು ಹೊಸನಗರ ಸರಕಾರಿ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಘಟನಾ ಸ್ಥಳಕ್ಕೆ ಹೊಸನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

- Advertisement -

Related news

error: Content is protected !!