Tuesday, July 28, 2026
spot_imgspot_img
spot_imgspot_img

ಶಿವಮೊಗ್ಗ: ಮನೆಯಲ್ಲಿ ಅಕ್ರಮ ಗನ್‌ ತಯಾರಿಸುತ್ತಿದ್ದ ಆರೋಪಿ ಬಂಧನ…!

- Advertisement -
- Advertisement -

ಶಿವಮೊಗ್ಗ: ಶಿಕಾರಿಪುರದ ತಾಲೂಕಿನ ಭದ್ರಾಪುರ ಗ್ರಾಮದಲ್ಲಿ ಮನೆಯಲ್ಲೇ ಅಕ್ರಮವಾಗಿ ಬಂದೂಕು ತಯಾರಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಲಕ್ಷ್ಮಣಪ್ಪ (67) ಎಂದು ಗುರುತಿಸಲಾಗಿದ್ದು, ಆರೋಪಿ ತನ್ನ ಹಳೆಯ ಮನೆಯಲ್ಲಿ ಅಕ್ರಮವಾಗಿ 7 ನಾಡ ಬಂದೂಕು ತಯಾರಿಸಿ ಮಾರಾಟ ಮಾಡಲು ಇಟ್ಟುಕೊಂಡಿದ್ದ. ಬಂದೂಕು ಸಂಗ್ರಹಿಸಿಟ್ಟಿರುವ ಬಗ್ಗೆ ಬಂದ ಮಾಹಿತಿ ಮೇರೆಗೆ ಪೊಲೀಸರು ಸರ್ಚ್ ವಾರೆಂಟ್ ಪಡೆದು ದಾಳಿ ನಡೆಸಿದ ವೇಳೆ ಬಂದೂಕುಗಳು ಪತ್ತೆಯಾಗಿದ್ದು, ಅವುಗಳನ್ನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಆರೋಪಿ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ತನಿಖಾ ತಂಡಕ್ಕೆ ಪೊಲೀಸ್ ಅಧೀಕ್ಷಕ ಬಿ. ನಿಖಿಲ್ ಅಭಿನಂದಿಸಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!