- Advertisement -
- Advertisement -





ಶಿವಮೊಗ್ಗ: ಬೈಕ್ ಮತ್ತು ಖಾಸಗಿ ಬಸ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ಶಿವಮೊಗ್ಗ-ಸವಳಂಗ ರಸ್ತೆಯಲ್ಲಿ ಬರುವ ಕೊಮ್ಮನಾಳು ತಿರುವಿನ ಬಳಿ ರವಿವಾರ ರಾತ್ರಿ ನಡೆದಿದೆ.
ದಾವಣಗೆರೆ ಜಿಲ್ಲೆ ನ್ಯಾಮತಿ ತಾಲೂಕಿನ ಹಳೇ ಜೋಗದ ನಿವಾಸಿ ಶಿವಕುಮಾರ್ (32) ಮೃತಪಟ್ಟವರು.
ಶಿವಕುಮಾರ್ ರವಿವಾರ ರಾತ್ರಿ 9:30ರ ಸುಮಾರಿಗೆ ಶಿವಮೊಗ್ಗದಿಂದ ಹಳೇ ಜೋಗದಲ್ಲಿರುವ ಮನೆಗೆ ಬೈಕಿನಲ್ಲಿ ತೆರಳುತ್ತಿದ್ದ ವೇಳೆ ಈ ಅಪಘಾತ ಸಂಭವಿಸಿದೆ. ಹೊನ್ನಾಳಿಯಿಂದ ಶಿವಮೊಗ್ಗದ ಕಡೆ ಬರುತ್ತಿದ್ದ ಖಾಸಗಿ ಬಸ್ ಮತ್ತು ಶಿವಕುಮಾರ್ ಚಲಾಯಿಸುತ್ತಿದ್ದ ಬೈಕ್ ಕೊಮ್ಮನಾಳು ತಿರುವಿನ ಬಳಿ ಮುಖಾಮುಖಿ ಢಿಕ್ಕಿಯಾಗಿದ್ದು, ಶಿವಕುಮಾರ್ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಈ ಬಗ್ಗೆ ಶಿವಮೊಗ್ಗ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ವರದಿ ಮೂಲಕ ತಿಳಿದುಬಂದಿದೆ.
- Advertisement -








