Thursday, July 23, 2026
spot_imgspot_img
spot_imgspot_img

ಇಂದು ಶಿವಮೊಗ್ಗದಲ್ಲಿ ಬಿಜೆಪಿ ರಾಜ್ಯ ಕಾರ್ಯಕಾರಣಿ ಸಭೆ

- Advertisement -
- Advertisement -

ಶಿವಮೊಗ್ಗ: ಭಾರತೀಯ ಜನತಾ ಪಕ್ಷದ ರಾಜ್ಯ ಕಾರ್ಯಕಾರಣಿ ಸಭೆ ಇಂದು ಶಿವಮೊಗ್ಗದಲ್ಲಿ ನಡೆಯುತ್ತಿದೆ. ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಸಿಎಂ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಞ ನಳಿನ್ ಕುಮಾರ್ ಕಟೀಲ್ ಭಾಗವಹಿಸಲಿದ್ದಾರೆ. ನಗರದ ಪ್ರೇರಣಾ ಕಲ್ವೇಕ್ಷನ್ ಹಾಲ್ ನಲ್ಲಿ ಸಭೆ ನಡೆಯಲಿದ್ದು, ಬೆಳಗ್ಗೆ 10:30 ಕ್ಕೆ ಕಾರ್ಯಕಾರಣಿ ಸಭೆ ಉದ್ಘಾಟನೆಯಾಯಿತು.

ಸಿಎಂ ಯಡಿಯೂರಪ್ಪ, ರಾಜ್ಯ ಉಸ್ತುವಾರಿ ಅರುಣ್ ಸಿಂಗ್, ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರದಾನ ಕಾರ್ಯದರ್ಶಿ ಸಿ ಟಿ ರವಿ, ಜಗದೀಶ್ ಶೆಟ್ಟರ್, ಲಕ್ಷ್ಮಣ್ ಸವದಿ, ಡಿಸಿಎಂ ಗೋವಿಂದ ಕಾರಜೋಳ, ಸದಾನಂದ ಗೌಡ, ಪ್ರಹ್ಲಾದ ಜೋಷಿ, ಸಂಸದೆ ಶೋಭಾ, ಸಂಸದ ಪ್ರತಾಪ್ ಸಿಂಹ ಸೇರಿ ಹಲವರು ಭಾಗಿಯಾಗಲಿದ್ದಾರೆ.

ರಾಮ ಮಂದಿರ ನಿರ್ಮಾಣಕ್ಕೆ ಹಿಂದೂ ಕುಟುಂಬಗಳಿಂದ ಮಾತ್ರ ದೇಣಿಗೆಗೆ ಮನವಿ. ಬೆಳಿಗ್ಗೆ 10 ಗಂಟೆಗೆ ಸಿಎಂ ಯಡಿಯೂರಪ್ಪ ಹಾಗೂ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಅವರಿಗೆ ಸನ್ಮಾನ ಏರ್ಪಡಿಸಲಾಗಿದ್ದು, ಶಿವಮೊಗ್ಗ ಬಿಜೆಪಿಯಿಂದ ಈ ಪ್ರತ್ಯೇಕ ಕಾರ್ಯಕ್ರಮ ನಡೆಯಲಿದೆ. ಕಾರ್ಯಕಾರಣಿ ಸಭೆಯಲ್ಲಿ ಸಂಘಟನೆ ಹಾಗೂ ಮುಂಬರುವ ಚುನಾವಣೆ ಬಗ್ಗೆ ಸುದೀರ್ಘ ಚರ್ಚೆ ನಡೆಯಲಿದ್ದು, ಸಂಜೆ 5 ಗಂಟೆಗೆ ಕಾರ್ಯಕಾರಣಿ ಸಭೆ ಅಂತ್ಯವಾಗಲಿದೆ.

- Advertisement -

Related news

error: Content is protected !!