- Advertisement -
- Advertisement -



ಶಿವಮೊಗ್ಗ: ಕುಂದಾಪುರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದ ಶ್ರೀ ದುರ್ಗಾಂಬಾ ಹೆಸರಿನ ಖಾಸಗಿ ಬಸ್ ಆಕಸ್ಮಿಕವಾಗಿ ಬೆಂಕಿಗೆ ಆಹುತಿಯಾಗಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಹುಲಿಕಲ್ ಘಾಟ್‌ನಲ್ಲಿ ಇಂದು ನಡೆದಿದೆ.
ಸಾಗರ ಸಮೀಪದ ಹುಲಿಕಲ್ ಘಾಟ್‌ನ ಚಂಡಿಕಾಂಬ ದೇಗುಲದ ಬಳಿಯ ತಿರುವಿನಲ್ಲಿ ಈ ಅವಘಡ ಸಂಭವಿಸಿದ್ದು, ಬಸ್ಸಿನ ಇಂಜಿನ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಮತ್ತು ಕಂಡಕ್ಟರ್ ಜಾಗರೂಕತೆಯಿಂದ ಕಾರ್ಯಪ್ರವೃತ್ತರಾದರು.
ಬಸ್ಸಿನಲ್ಲಿ ಸುಮಾರು 20ಕ್ಕೂ ಹೆಚ್ಚು ಪ್ರಯಾಣಿಕರಿದ್ದರು ಎನ್ನಲಾಗಿದೆ. ಎಲ್ಲರೂ ಯಾವುದೇ ಪ್ರಾಣಾಪಾಯವಿಲ್ಲದೆ ಸುರಕ್ಷಿತವಾಗಿ ಕೆಳಗಿಳಿದಿದ್ದಾರೆ. ಪ್ರಯಾಣಿಕರು ಕೆಳಗಿಳಿಯುತ್ತಿದ್ದಂತೆಯೇ ಬೆಂಕಿ ಇಡೀ ಬಸ್ಸಿಗೆ ವ್ಯಾಪಿಸಿದ್ದು, ವಾಹನವು ಸಂಪೂರ್ಣವಾಗಿ ಸುಟ್ಟು ಭಸ್ಮವಾಗಿದೆ.
ಅಗ್ನಿಶಾಮಕ ದಳ ಬರುವ ಮೊದಲೇ ಬಸ್ ಧಗಧಗನೆ ಹೊತ್ತಿ ಉರಿದಿದ್ದು, ಶಾರ್ಟ್ ಸರ್ಕ್ಯೂಟ್ ನಿಂದಾಗಿ ಇಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರಬಹುದು ಎಂದು ಶಂಕಿಸಲಾಗಿದೆ ಎಂದು ವರದಿಯಿಂದ ತಿಳಿದುಬಂದಿದೆ.
- Advertisement -








