Sunday, July 19, 2026
spot_imgspot_img
spot_imgspot_img

ಶಿವಮೊಗ್ಗ: ಕುಸಿದುಬಿದ್ದು ಇಂಜಿನಿಯರಿಂಗ್ ವಿದ್ಯಾರ್ಥಿ ಸಾವು!

- Advertisement -
- Advertisement -

ಶಿವಮೊಗ್ಗ: ವಾಜಪೇಯಿ ಬಡಾವಣೆಯ ಹಾಸ್ಟೆಲ್ ಒಂದರಲ್ಲಿ, ಇಂಜಿನಿಯರ್‌ ವಿದ್ಯಾರ್ಥಿಯೊಬ್ಬ ಕುಸಿದುಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ, ಯುವಕ ಹೃದಯಾಘಾತದಿಂದ ಸಾವನ್ನಪ್ಪಿರುವ ಶಂಕೆ ವ್ಯಕ್ತವಾಗಿದೆ.

ಮೃತನನ್ನು ಬಳ್ಳಾರಿ ಮೂಲದ ಗಣೇಶ್ (21) ಎಂದು ಗುರುತಿಸಲಾಗಿದೆ. ಈತ ನಗರದ ಖಾಸಗಿ ಕಾಲೇಜೊಂದರಲ್ಲಿ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿದ್ಯಾಭ್ಯಾಸ ಮಾಡುತ್ತಿದ್ದ. ವಾಜಪೇಯಿ ಬಡಾವಣೆಯ ಮೆಟ್ರಿಕ್ ನಂತರದ ಹಾಸ್ಟೆಲ್‌ನಲ್ಲಿ ವಾಸವಾಗಿದ್ದ. ಇಂದು (ಜ.9) ಸ್ನಾನಕ್ಕೆ ತೆರಳಿದ್ದ ವೇಳೆ ಯುವಕ ಕುಸಿದು ಬಿದ್ದಿದ್ದ. ಆತನನ್ನ ಹಾಸ್ಟೆಲ್‌ ಸಿಬ್ಬಂದಿ ಆಸ್ಪತ್ರೆಗೆ ಸಾಗಿಸುವ ಪ್ರಯತ್ನ ಮಾಡಿದ್ದಾರೆ. ಆದರೆ ಮಾರ್ಗ ಮಧ್ಯೆದಲ್ಲಿ ಗಣೇಶ್ ಮೃತಪಟ್ಟಿದ್ದಾನೆ.

- Advertisement -

Related news

error: Content is protected !!