Friday, July 24, 2026
spot_imgspot_img
spot_imgspot_img

ಶಿವಮೊಗ್ಗ: ಅಗ್ನಿ ಅವಘಡ; ರಸ್ತೆ ಮಧ್ಯೆಯೇ ಕಾರು ಬೆಂಕಿಗಾಹುತಿ

- Advertisement -
- Advertisement -

ಶಿವಮೊಗ್ಗ: ಹೊಸನಗರ ತಾಲ್ಲೂಕಿನ ರಿಪ್ಪನ್‌ಪೇಟೆ ಸಮೀಪದ ಬೆಳ್ಳೂರು ಬಳಿ ಶನಿವಾರ ತಡರಾತ್ರಿ ಚಲಿಸುತ್ತಿದ್ದ ಮಾರುತಿ ಓಮ್ನಿ ಕಾರು ಆಕಸ್ಮಿಕವಾಗಿ ಬೆಂಕಿಗಾಹುತಿಯಾಗಿರುವ ಘಟನೆ ನಡೆದಿದೆ.

ಶಿವಮೊಗ್ಗದಿಂದ ತೀರ್ಥಹಳ್ಳಿ ತಾಲ್ಲೂಕಿನ ಕೋಣಂದೂರು ಸಮೀಪದ ದೆಮ್ಲಾಪುರಕ್ಕೆ ಮದುವೆ ಕಾರ್ಯದ ನಿಮಿತ್ತವಾಗಿ ಕಾರಿನಲ್ಲಿ ದಿನಸಿ ಸಾಮಗ್ರಿಗಳನ್ನು ತುಂಬಿಕೊಂಡು ಹೋಗುತ್ತಿರುವಾಗ ಈ ಘಟನೆ ನಡೆದಿದ್ದು, ಕಾರಿನ ಎಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಶಾರ್ಟ್ ಸರ್ಕ್ಯೂಟ್ ಬೆಂಕಿಗೆ ಕಾರಣ ಎಂದು ಶಂಕಿಸಲಾಗಿದೆ.

ಚಾಲಕ ಶ್ರೀಕಾಂತ್ ಮತ್ತು ಮತ್ತೊಬ್ಬ ಪ್ರಯಾಣಿಕ ಗಂಗಾಧರ ಗೌಡ ಅವರು ಹೊಗೆ ಕಾಣಿಸಿಕೊಂಡ ತಕ್ಷಣ ಕಾರಿನಿಂದ ಕೆಳಗಿಳಿದಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಕಾರು ರಸ್ತೆ ಮಧ್ಯೆಯೇ ಧಗಧಗನೆ ಉರಿದು ಸಂಪೂರ್ಣವಾಗಿ ಭಸ್ಮವಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!