Sunday, August 2, 2026
spot_imgspot_img
spot_imgspot_img

ಶಿವಮೊಗ್ಗ: ಭಾರೀ ಮಳೆಗೆ ಗುಡ್ಡ ಕುಸಿತ – ಒಂದೇ ಕುಟುಂಬದ ಮೂವರು ಸಾವು

- Advertisement -
- Advertisement -

ಶಿವಮೊಗ್ಗ: ಮಲೆನಾಡು ಭಾಗದಲ್ಲಿ ನಿರಂತರ ಸುರಿಯುತ್ತಿರುವ ಭಾರೀ ಮಳೆಯ ನಡುವೆಯೇ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಇಂದಿರಾ ನಗರದಲ್ಲಿ ಸಂಭವಿಸಿದ ಗುಡ್ಡ ಕುಸಿತದಲ್ಲಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ದಾರುಣ ಘಟನೆ ಶನಿವಾರ ತಡರಾತ್ರಿ ನಡೆದಿದೆ.

ತಡರಾತ್ರಿ ಸುಮಾರು 2.30ರ ವೇಳೆಗೆ ಸುರಿದ ಭಾರೀ ಮಳೆಯಿಂದ ಗುಡ್ಡ ಕುಸಿದು, ಅದರ ಕೆಳಭಾಗದಲ್ಲಿ ನಿರ್ಮಿಸಲಾಗಿದ್ದ ಶೆಡ್‌ನ ಮೇಲೆ ಮಣ್ಣು ಮತ್ತು ಬಂಡೆಗಳು ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಶೆಡ್‌ನಲ್ಲಿ ವಾಸವಿದ್ದ ಕುಟುಂಬದ ಸದಸ್ಯರು ಮಣ್ಣಿನಡಿ ಸಿಲುಕಿ ಮೃತಪಟ್ಟಿದ್ದಾರೆ. ಪಕ್ಕದ ಶೆಡ್‌ನಲ್ಲಿದ್ದ ಕೆಲವರಿಗೂ ಗಂಭೀರ ಗಾಯಗಳಾಗಿವೆ.

ಮೃತರನ್ನು ಮಲ್ಲಿಕಾರ್ಜುನ (35), ನಾಗವೇಣಿ (28) ಹಾಗೂ ಸಂತೋಷ್ (3) ಎಂದು ಗುರುತಿಸಲಾಗಿದೆ. ಇವರು ಕೊಪ್ಪಳ ಜಿಲ್ಲೆಯ ಗಂಗಾವತಿ ತಾಲೂಕಿನ ಕೊಕ್ಕರೆಗಾರು ಗ್ರಾಮದ ನಿವಾಸಿಗಳಾಗಿದ್ದು, ಉದ್ಯೋಗ ನಿಮಿತ್ತ ತೀರ್ಥಹಳ್ಳಿಯಲ್ಲಿ ವಾಸಿಸುತ್ತಿದ್ದರು ಎನ್ನಲಾಗಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆಯೇ ಪೊಲೀಸ್ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದರು. ಮಣ್ಣಿನಡಿ ಸಿಲುಕಿದ್ದ ಮೃತದೇಹಗಳನ್ನು ಹೊರತೆಗೆಯಲು ಸಿಬ್ಬಂದಿ ಹರಸಾಹಸ ಪಟ್ಟರು. ಅಪಘಾತದಲ್ಲಿ ಗಾಯಗೊಂಡವರನ್ನು ಚಿಕಿತ್ಸೆಗಾಗಿ ತೀರ್ಥಹಳ್ಳಿಯ ಜಯಚಾಮರಾಜೇಂದ್ರ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಸಂಬಂಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ತನಿಖೆ ನಡೆಯುತ್ತಿದೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!