Saturday, June 27, 2026
spot_imgspot_img
spot_imgspot_img

ಅಪ್ರಾಪ್ತ ವಿದ್ಯಾರ್ಥಿನಿಯ ಅಶ್ಲೀಲ ಪೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಟ್ಟ ಯುವಕ ಅರೆಸ್ಟ್!

- Advertisement -
- Advertisement -

ಶಿವಮೊಗ್ಗ: ಸಾಮಾಜಿಕ ಜಾಲತಾಣದಲ್ಲಿ ಅಪ್ರಾಪ್ತ ವಿದ್ಯಾರ್ಥಿನಿಯ ಅಶ್ಲೀಲ ಪೋಟೋವನ್ನು ಹರಿಬಿಟ್ಟ ಯುವಕನನ್ನು ಪೊಲೀಸರು ಬಂಧಿಸಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ನಡೆದಿದೆ.

ಆರೋಪಿಯು ಸಾಗರದ ತಾಲೂಕಿನ ಆನಂದಪುರದ ಶೆಟ್ಟಿಕೊಪ್ಪ ನಿವಾಸಿ ಪ್ರದೀಪ್ ( 25 ವರ್ಷ) ಎಂಬಾತನೇ ಪೊಲೀಸರಿಂದ ಬಂಧನಕ್ಕೆ ಒಳಗಾದ ಯುವಕ.

ಆರೋಪಿ ಪ್ರದೀಪ ಸಾಗರದಲ್ಲಿ ಪಾಲುದಾರಿಕೆಯಲ್ಲಿ ಬಟ್ಟೆ ಅಂಗಡಿಯನ್ನು ಮಾಡಿಕೊಂಡಿದ್ದನು. ಈತ ಅಪ್ರಾಪ್ತ ವಿದ್ಯಾರ್ಥಿನಿಯ ಜೊತೆಗೆ ಸಲುಗೆ ಬೆಳೆಸಿಕೊಂಡಿದ್ದು, ವಿದ್ಯಾರ್ಥಿನಿಯ ಅಶ್ಲೀಲ ಪೋಟೋಗಳನ್ನು ತೆಗೆದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾನೆ. ವಿದ್ಯಾರ್ಥಿನಿಯ ದೂರಿನ ಆಧಾರದ ಮೇಲೆ ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು ಪೋಸ್ಕೋ ಕಾಯ್ದೆಯಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ‌. ಆರೋಪಿ ಪ್ರದೀಪನನ್ನು ಬಂಧಿಸಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ‌.

- Advertisement -

Related news

error: Content is protected !!