- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಬೆಂಗಳೂರು: ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಗೆ ಇಂದು 58ನೇ ವರ್ಷದ ಹುಟ್ಟು ಹಬ್ಬದ ಸಂಭ್ರಮ. ಹೀಗಾಗಿ ಕಳೆದ ಮಧ್ಯರಾತ್ರಿ ಆಪ್ತರೊಂದಿಗೆ ಕೇಕ್ ಕಟ್ ಮಾಡಿ ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡರು.
ಕಳೆದ ವರ್ಷ ಭುಜದ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ಹಿನ್ನಲೆ ಹ್ಯಾಟ್ರಿಕ್ ಹೀರೋ ಹುಟ್ಟು ಹಬ್ಬ ಆಚರಿಸಿಕೊಂಡಿರಲಿಲ್ಲ. ಆದರೆ ಈ ವರ್ಷ ಕೊರೊನಾ ಭೀತಿ ಹಿನ್ನಲೆಯಲ್ಲಿ ಮನೆಯಿಂದ ದೂರ ಹೋಗಿ ಪತ್ನಿ ಗೀತಾ ಹಾಗೂ ಆಪ್ತರೊಂದಿಗೆ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.
ಶಿವಣ್ಣನಿಗೆ ಅಭಿಮಾನಿಗಳಿಂದ ಸ್ಪೆಷಲ್ ಸಾಂಗ್:
ಶಿವಣ್ಣ ಹುಟ್ಟುಹಬ್ಬ ಹಿನ್ನಲೆಯಲ್ಲಿ ಅಭಿಮಾನಿಗಳು ಸ್ಪೆಷಲ್ ಸಾಂಗ್ ವೊಂದನ್ನು ಡೆಡಿಕೇಟ್ ಮಾಡಿದ್ದಾರೆ. ನಿರ್ಮಾಪಕ ಕೆ.ಪಿ.ಶ್ರೀಕಾಂತ್ ಸಹಕಾರದೊಂದಿಗೆ ನಿರ್ಮಾಣ ಮಾಡಿರುವ ಈ ಹಾಡನ್ನು ಡಾಲಿ ಧನಂಜಯ್ ರಿಲೀಸ್ ಮಾಡಿದ್ದಾರೆ.
- Advertisement -