Friday, May 3, 2024
spot_imgspot_img
spot_imgspot_img

ಎಲ್ಲೆಡೆ ಶಿವರಾತ್ರಿಯ ಸಂಭ್ರಮ..

- Advertisement -G L Acharya panikkar
- Advertisement -

ಇಂದು ಎಲ್ಲೆಡೆ ಶಿವರಾತ್ರಿ ಹಬ್ಬದ ಸಂಭ್ರಮ.. ಹಿಂದೂಗಳ ಪ್ರಮುಖ ಹಬ್ಬಗಳಲ್ಲೊಂದಾದ ಶಿವರಾತ್ರಿ ಈ ದಿನದಂದು ಕೈಲಾಸ ವಾಸ ಪರಶಿವನನ್ನು ಕೋಟಿ ಕೋಟಿ ಜನರು ಭಜಿಸಿ ಪೂಜಿಸುತ್ತಾರೆ. ಶಿಶಿರ ಋತುವಿನ ಮಾಘ ಮಾಸದ ಕೃಷ್ಣ ಪಕ್ಷ ಬಹುಳ ಚತುರ್ದಶಿ ಯಂದು ಬರುವ ಶಿವರಾತ್ರಿಯ ದಿನ ಭಕ್ತಾದಿಗಳು ಶಂಭೋ ಶಂಕರನನ್ನು ನೆನೆದು, ಪುನೀತರಾಗುತ್ತಾರೆ.

ತನ್ನ ನಂಬಿ ಬಂದ ಭಕ್ತರ ಇಷ್ಟಾರ್ಥಗಳಿಗೆ ಎಂದಿಗೂ ನಿರಾಸೆ ಮಾಡದ ದಯಾಮಯಿ ಶಿವನಿಗೆ ಶಿವರಾತ್ರಿಯಂದು ದೇಶಾದ್ಯಂತ ವಿಶೇಷ ಪೂಜೆಗಳು ನೆರವೇರುತ್ತವೆ. ಇಡೀ ಭಾರತದಾದ್ಯಂತ ಬಹುತೇಕ ಎಲ್ಲಾ ಭಾಗಗಳಲ್ಲೂ ಆಚರಿಸುವ ಹಬ್ಬ ಇದು. ಈ ಹಬ್ಬದಂದು ದಿನವಿಡೀ ಪೂಜೆ, ಉಪವಾಸ ಮಾಡಿ, ರಾತ್ರಿಯಿಡೀ ಜಾಗರಣೆ ಮಾಡಿ ಶಿವನನ್ನು ಆರಾಧಿಸುವ ಸಂಪ್ರದಾಯವಿದೆ.

ಶಿವನಿಗೆ ಅತೀ ಶ್ರೇಷ್ಠವಾಗಿರುವ ಬಿಲ್ವ ಪತ್ರೆಯನ್ನು ಅರ್ಪಿಸಿ, ತಿಲಗಿ ಪುಷ್ಪ, ತುಳಸಿಯಿಂದ ಶಿವಲಿಂಗವನ್ನು ಅಲಂಕಾರ ಮಾಡಿ ಶಿವನ್ನು ಭಜಿಸಿದರೆ, ಪಾಪಗಳು ಪರಿಹಾರವಾಗುತ್ತವೆ, ಮೋಡಗಳೇ ಇಲ್ಲದ ಶುಭ್ರ ಆಕಾಶದಲ್ಲಿ ಬಂದಿರುವ ಚಂದ್ರನ ಬೆಳಕಿನಲ್ಲಿ ಶಿವನಿಗೆ ಅಭಿಷೇಕ ಮಾಡಿ ಆರಾಧಿಸಿದರೆ ಅತ್ಯಂತ್ರ ಶ್ರೇಷ್ಠ ಎಂಬ ನಂಬಿಕೆಗಳಿವೆ. ಶಿವರಾತ್ರಿಯ ದಿನವಿಡೀ ಉಪವಾಸ ಮಾಡಿ, ಜಾಗರಣೆ ಮಾಡಿ ಶಿವನನ್ನು ಆರಾಧಿಸಿದರೆ ಸಕಲ ಪಾಪಗಳೂ ಕಳೆಯುತ್ತವೆ ಎಂದು ನಂಬಲಾಗಿದೆ.

ಶಿವರಾತ್ರಿ ಬಗ್ಗೆ ಅನೇಕ ಕಥೆಗಳಿವೆ.ಶಿವನನ್ನ ವರಿಸಲು ಪಾರ್ವತಿ ಹಠ ಹಿಡಿದು ವ್ರತ ಮಾಡುತ್ತಿರುತ್ತಾಳೆ. ಕೊನೆಗೂ ಅವಳ ಹಠಕ್ಕೆ ಮಣಿದ ಶಿವ ಅವಳನ್ನ ವರಿಸಲು ಒಪ್ಪುತ್ತಾನೆ. ಅದರಂತೆ ಈ ದಿನವನ್ನು ಶಿವ ಪಾರ್ವತಿ ದೇವಿಯನ್ನು ಮದುವೆಯಾದ ದಿನ ಎನ್ನಲಾಗುತ್ತದೆ.

ಅಲ್ಲದೆ, ದೇವತೆಗಳು ಹಾಗೂ ಅಸುರರ ನಡುವೆ ಸಮುದ್ರ ಮಂಥನ ನಡೆದು ವಿಷ ಉದ್ಭವವಾದಾಗ, ಅದನ್ನು ಶಿವ ಕುಡಿದ. ವಿಷ ಗಂಟಲೊಳಗಿಂದ ಇಳಿಯದಂತೆ ಪಾರ್ವತಿ ಇಡೀ ರಾತ್ರಿ ತಡೆದಳು ಎನ್ನುತ್ತದೆ ಶಿವಪುರಾಣದ ಇನ್ನೊಂದು ಮಹಿಮೆ.

ಇದಲ್ಲದೇ, ಭಗೀರಥನ ತಪಸ್ಸಿಗೆ ಮೆಚ್ಚಿ ಭೂಮಿಗೆ ಇಳಿದು ಬಂದ ಗಂಗೆಯ ರಭಸವನ್ನು ತಡೆಯಲು ಶಿವ ತನ್ನ ಜಡೆಯಲ್ಲಿ ಗಂಗೆಯನ್ನು ಹಿಡಿದುಕೊಳ್ಳುತ್ತಾನೆ. ಇಲ್ಲದಿದ್ದರೆ ಗಂಗೆಯ ರಭಸಕ್ಕೆ ಇಡೀ ಭೂಲೋಕ ಕೊಚ್ಚಿ ಹೋಗುತ್ತಿತ್ತು. ಶಿವ ಗಂಗೆಯನ್ನು ಹಿಡಿದುಕೊಂಡಿದ್ದು ಕಂಡ ಭಗೀರಥ ಸ್ವಲ್ಪ ಚಿಂತೆಗೆ ಒಳಗಾಗುತ್ತಾನೆ. ಕೊನೆಗೆ ಗಂಗೆಯನ್ನು ಭೂಮಿಗೆ ಹರಿದು ಬಿಡುವಂತೆ ಶಿವನನ್ನು ಬೇಡಿಕೊಳ್ಳುತ್ತಾನೆ. ಭಗೀರಥನ ಭಕ್ತಿಗೆ ಮೆಚ್ಚಿದ ಶಿವ ತನ್ನ ಜಡೆಯಲ್ಲಿದ್ದ ಗಂಗೆಯನ್ನು ಹರಿದು ಬಿಡುತ್ತಾನೆ. ಈ ಎಲ್ಲಾ ಘಟನೆಗಳು ನಡೆದ ದಿನವೇ ಈ ಮಹಾ ಶಿವರಾತ್ರಿ ಎನ್ನುವ ನಂಬಿಕೆ ಇದೆ.

ಇನ್ನು, ಶಿವನ ಆದಿ ಮತ್ತು ಅಂತ್ಯ ಹುಡುಕಲು ಹೊರಟ ವಿಷ್ಣು ಹಾಗೂ ಬ್ರಹ್ಮನಿಗೆ, ಶಿವರಾತ್ರಿಯಂದು ಶಿವ ಲಿಂಗರೂಪಿಯಾಗಿ ದರ್ಶನ ನೀಡಿದ ಎಂಬುದು ಪ್ರತೀತಿ.

- Advertisement -

Related news

error: Content is protected !!