Saturday, May 11, 2024
spot_imgspot_img
spot_imgspot_img

ಶೋಭಾ ಕರಂದ್ಲಾಜೆಗೆ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟ ಸಾಧ್ಯತೆ..!!ರಾಜಾಹುಲಿ ಆಯ್ಕೆ ಮಾಡಿದ್ದು ಯಾರ ಹೆಸರು..?

- Advertisement -G L Acharya panikkar
- Advertisement -

ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆದ್ದು ಅಧಿಕಾರದ ಚುಕ್ಕಾಣಿ ಹಿಡಿದರು, ಬಿಜೆಪಿಯಲ್ಲಿ ವಿಪಕ್ಷ ನಾಯಕ ಹಾಗೂ ರಾಜ್ಯಾಧ್ಯಕ್ಷ ಹೆಸರು ಇನ್ನೂ ಅಂತಿಮವಾಗಿಲ್ಲ. ಈ ನಡುವೆ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ತೆರಳಿ ಹೈಕಮಾಂಡ್ ಮುಂದೆ ಹೊಸ ಹೆಸರೊಂದನ್ನು ಘೋಷಿಸಿದ್ದಾರೆ ಎನ್ನಲಾಗಿದೆ.

ಬಿಜೆಪಿ ಹಿರಿಯ ಮುಖಂಡ ಯಡಿಯೂರಪ್ಪ ಹೇಳಿರುವ ಹೆಸರಿಗೆ ಹೈಕಮಾಂಡ್ ಬಹುತೇಕ ಒಪ್ಪಿಗೆ ಸೂಚಿಸಿದೆ ಎಂದು ಹೇಳಲಾಗಿದೆ. ಕೇಂದ್ರ ಸಚಿವೆ ಆಗಿರುವ ಶೋಭಾ ಕರಂದ್ಲಾಜೆ ಅವರ ಹೆಸರನ್ನು ಯಡಿಯೂರಪ್ಪ ಸೂಚಿಸಿದ್ದಾರೆ ಎನ್ನಲಾಗಿದ್ದು, ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಪ್ರಬಲ ರಾಜ್ಯಾಧ್ಯಕ್ಷರು ಬೇಕು ಎಂದು ಬಿಎಸ್ ವೈ ಹೇಳಿದ್ದಾರಂತೆ. ಶೋಭಾ ಕರಂದ್ಲಾಜೆ ಯಡಿಯೂರಪ್ಪ ಅವರ ಆಪ್ತ ವಲಯದಲ್ಲಿ ಗುರುತಿಸಿಕೊಂಡಿರುವುದರಿಂದ ಬಿಎಸ್ ವೈ ಅವರ ಹೆಸರನ್ನು ಸೂಚಿಸಿದ್ದಾರೆ ಎನ್ನಲಾಗಿದೆ.

ಮೊದಲ ಬಾರಿಗೆ ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದಾಗ ಅಂದಿನ ಸರ್ಕಾರದಲ್ಲಿ ಶೋಭಾ ಕರಂದ್ಲಾಜೆ ಪ್ರಬಲ ಖಾತೆಯ ಸಚಿವ ಸ್ಥಾನವನ್ನು ಹೊಂದಿದ್ದರು. ಹೀಗಾಗಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ಅವರ ಹೆಸರನ್ನು ಸೂಚಿಸಿದ್ದಾರೆ ಎಂದು ವರದಿಯಾಗಿದೆ. ಆದರೆ, ಇನ್ನೂ ಕೂಡ ವಿಪಕ್ಷ ನಾಯಕನನ್ನಾಗಿ ಯಾರನ್ನು ಮಾಡಬೇಕು ಅನ್ನೋದು ಅಂತಿಮವಾಗದ ಹಿನ್ನೆಲೆಯಲ್ಲಿ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನೇಮಕವಾಗಲಿರುವವರ ಹೆಸರನ್ನು ತಡೆಹಿಡಿಯಲಾಗಿದೆ ಎಂದು ಹೇಳಲಾಗಿದೆ.

ಇನ್ನು ಈ ಸಂಬಂಧ ಜುಲೈ 2ರಂದು ಯಡಿಯೂರಪ್ಪ ದೆಹಲಿಗೆ ತೆರಳಿದ್ದರು. ವಿರೋಧ ಪಕ್ಷದ ನಾಯಕ ಹಾಗೂ ರಾಜ್ಯಾಧ್ಯಕ್ಷ ಸ್ಥಾನದ ಆಯ್ಕೆ ಬಗ್ಗೆ ಹೈಕಮಾಂಡ್ ನೊಂದಿಗೆ ಸುದೀರ್ಘ ಚರ್ಚೆ ನಡೆಸಿದ್ದರು. ವಿಪಕ್ಷ ನಾಯಕನ ಸ್ಥಾನವನ್ನು ಲಿಂಗಾಯತ ಸಮುದಾಯಕ್ಕೆ ನೀಡಿದರೆ, ರಾಜ್ಯಾಧ್ಯಕ್ಷ ಸ್ಥಾನವನ್ನು ಒಕ್ಕಲಿಗ ಸಮುದಾಯಕ್ಕೆ ನೀಡಬೇಕು ಎಂಬ ಬಗ್ಗೆ ಮಾತುಕತೆ ನಡೆದಿದೆ ಎನ್ನಲಾಗಿದೆ.

- Advertisement -

Related news

error: Content is protected !!