Sunday, October 6, 2024
spot_imgspot_img
spot_imgspot_img

ಮದ್ಯಪ್ರಿಯರಿಗೆ ಶಾಕ್; ಬಿಯರ್​ ಬೆಲೆ ಮತ್ತೆ ಏರಿಕೆ..!

- Advertisement -
- Advertisement -

ಬೆಂಗಳೂರು: ಮದ್ಯಪ್ರಿಯರಿಗೆ ಮತ್ತೊಂದು ಶಾಕ್​ ಎದುರಾಗಿದೆ. ರಾಜ್ಯದಲ್ಲಿ ಬಿಯರ್ ಬೆಲೆ 10 ರಿಂದ 20 ರೂಪಾಯಿ ಏರಿಕೆ ಮಾಡಲಾಗಿದೆ. ರಾಜ್ಯದಲ್ಲಿ ಕಳೆದ 17 ತಿಂಗಳಲ್ಲಿ 5ನೇ ಬಾರಿಗೆ ಬಿಯರ್ ಬೆಲೆ ಏರಿಕೆಯಾಗಿದೆ.

ಒಂದು ತಿಂಗಳ ಹಿಂದೆಯಷ್ಟೆ ಬಿಯರ್ ದರ ಏರಿಕೆಯಾಗಿತ್ತು. ಇದೀಗ ಮತ್ತೆ ಕಚ್ಚಾ ವಸ್ತುಗಳ ದರ ಏರಿಕೆ ಕಾರಣ ನೀಡಿ ದರ ಏರಿಕೆ ಮಾಡಲು ಕಂಪನಿಗಳು ಮುಂದಾಗಿವೆ. ಸಿದ್ದರಾಮಯ್ಯ ಸರ್ಕಾರ ಬಂದ ಮೇಲೆ ಬಿಯರ್ ದರ ಸುಮಾರು 50ರಿಂದ 60 ರೂ.ವರೆಗೆ ಏರಿಕೆಯಾಗಿದೆ.

ರಾಜ್ಯದಲ್ಲಿ ವಿಧಾನಸಭಾ ಚುನಾವಣೆ ನಂತರ ಕಾಂಗ್ರೆಸ್‌ ಸರ್ಕಾರ ಬಿಯರ್‌ ಮೇಲೆ ಶೇ.20 ರಷ್ಟು ಹೆಚ್ಚುವರಿ ಸುಂಕ ವಿಧಿಸಿತ್ತು. ಇದರಿಂದ ಬಿಯರ್ ದರ ಅಂದು ಏರಿಕೆಯಾಗಿತ್ತು. ಆ ನಂತರ ಬಿಯರ್‌ ಉತ್ಪಾದನಾ ಕಂಪನಿಗಳು ಹೆಚ್ಚುತ್ತಿರುವ ಉತ್ಪಾದನಾ ವೆಚ್ಚ ಸರಿದೂಗಿಸಿಕೊಳ್ಳಲು ಬಾಟಲ್‌ ಮೇಲೆ ಕನಿಷ್ಠ 10 ರೂಪಾಯಿವರೆಗೆ ಏರಿಕೆ ಮಾಡಿದ್ದವು. ನಂತರ ಮತ್ತೆ ಸರ್ಕಾರದಿಂದ ಬಿಯರ್ ಮೇಲಿನ ಸುಂಕ‌ ಹೆಚ್ಚಳ ಮಾಡಲಾಗಿದೆ.

ಫೆಬ್ರವರಿಯಲ್ಲಿ ಬಿಯರ್ ದರ ಮತ್ತೆ ಏರಿಕೆ ಕಂಡಿತ್ತು. ಇದೀಗ ಮತ್ತೆ ಬಿಯರ್ ದರ ಏರಿಕೆಗೆ ಕಂಪನಿಗಳು ತೀರ್ಮಾನ ಮಾಡಿಕೊಂಡಿವೆ. 15 ತಿಂಗಳ ಅಂತರದಲ್ಲಿ ಬಿಯರ್‌ ಬೆಲೆ ಸುಮಾರು ₹60 ರೂಪಾಯಿವರೆಗೆ ಹೆಚ್ಚಳವಾದಂತಾಗಿದೆ.

- Advertisement -

Related news

error: Content is protected !!