Sunday, April 28, 2024
spot_imgspot_img
spot_imgspot_img

ಸಂಸದ ಪ್ರಜ್ವಲ್‌ ರೇವಣ್ಣಗೆ ಶಾಕ್‌; ಸಂಸದ ಸ್ಥಾನದಿಂದ ಅನರ್ಹ- ಹೈಕೋರ್ಟ್‌ ಆದೇಶ

- Advertisement -G L Acharya panikkar
- Advertisement -

ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ್ದಾರೆ ಎಂಬ ಹಿನ್ನೆಲೆಯಲ್ಲಿ ಹಾಸನದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ಅನರ್ಹಗೊಳಿಸಿ ಹೈಕೋರ್ಟ್‌ ಆದೇಶ ಹೊರಡಿಸಿದೆ. ಚುನಾವಣಾ ಪ್ರಮಾಣ ಪತ್ರದಲ್ಲಿ ಸುಳ್ಳು ಮಾಹಿತಿ ಸಲ್ಲಿಸಿದ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನ್ಯಾ.ಕೆ.ನಟರಾಜನ್ ಅವರು ಆದೇಶ ಪ್ರಕಟಿಸಿದ್ದಾರೆ. ಈ ಆದೇಶದಿಂದ ಇನ್ನು 6 ವರ್ಷಗಳ ಕಾಲ ಪ್ರಜ್ವಲ್‌ ರೇವಣ್ಣ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಸಾಧ್ಯವಿಲ್ಲ

2019ರ ಲೋಕಾಸಭಾ ಚುನಾವಣಾ ಸಂದರ್ಭದಲ್ಲಿ ನಾಮಪತ್ರ ಸಲ್ಲಿಕೆ ವೇಳೆ ಸುಳ್ಳು ಮಾಹಿತಿ ನೀಡಿದ್ದಾರೆ. ಸುಳ್ಳು ಮಾಹಿತಿ ನೀಡಿದ ಹಿನ್ನೆಲೆಯಲ್ಲಿ ಅವರನ್ನು ಸಂಸದ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಕೋರಿ ಹಾಸನ ಬಿಜೆಪಿ ಅಭ್ಯರ್ಥಿ ಎ. ಮಂಜು ಮತ್ತು ವಕೀಲ ದೇವರಾಜೇಗೌಡ ಹೈಕೋರ್ಟ್‌ನಲ್ಲಿ ಪ್ರಕರಣ ದಾಖಲಿಸಿದ್ದರು.

ವಕೀಲ ಹಾಗೂ ಕೆಡಿಪಿ ಮಾಜಿ ಸದಸ್ಯ ಜಿ.ದೇವರಾಜೇಗೌಡ ಅವರು, ಪ್ರಜ್ವಲ್‌ ರೇವಣ್ಣ ನಾಮಪತ್ರ ಸಲ್ಲಿಕೆ ವೇಳೆ ತಮ್ಮ ಆಸ್ತಿ ವಿವರವನ್ನು ಮುಚ್ಚಿಟ್ಟು ಸುಳ್ಳು ಪ್ರಮಾಣ ಪತ್ರವನ್ನು ಸಲ್ಲಿಸಿದ್ದಾರೆ ಎಂದು ಆರೋಪಿಸಿ ಏ.26, 2019ರಲ್ಲಿ ರಾಜ್ಯ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಪ್ರಜ್ವಲ್‌ ರೇವಣ್ಣ ಪ್ರಮಾಣ ಪತ್ರದಲ್ಲಿ ಹಲವಾರು ಸುಳ್ಳು ಮಾಹಿತಿಗಳನ್ನು ನೀಡಿದ್ದು ಅವರ ನಾಮಪತ್ರ ರದ್ದುಗೊಳಿಸಿ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ತಿಳಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಕೂಲಂಕುಷವಾಗಿ ಪರಿಶೀಲಿಸಿ ವಿವರವಾದ ವರದಿ ಸಲ್ಲಿಸುವಂತೆ ರಾಜ್ಯ ಚುನಾವಣಾ ಆಯೋಗವು ಹಾಸನ ಜಿಲ್ಲಾ ಚುನಾವಣಾಧಿಕಾರಿಗೆ ಸೂಚನೆ ನೀಡಿತ್ತು.

2019ರ ಲೋಕಸಭೆ ಚುನಾವಣೆಗೆ ಪ್ರಜ್ವಲ್ ತಮ್ಮ ಆಸ್ತಿ ವಿವರ ಸಲ್ಲಿಕೆ ಮಾಡಿದ್ದರು. ಈ ವೇಳೆ ಪ್ರಜ್ವಲ್‌ ಒಟ್ಟು ಆಸ್ತಿ .8,13,622 ಆಗಿದ್ದು, ಇದರಲ್ಲಿ .4,89,15,029 ಮೌಲ್ಯದ ಸ್ಥಿರಾಸ್ತಿ, .1,68,86,632 ಮೌಲ್ಯದ ಚರಾಸ್ತಿಗಳೂ ಸೇರಿವೆ. ಇಷ್ಟೇ ಅಲ್ಲದೆ, ಪ್ರಜ್ವಲ್‌ ಅವರು .3.72 ಕೋಟಿ ಖಾಸಗಿ ಸಾಲವನ್ನೂ ಮಾಡಿಕೊಂಡಿದ್ದಾರೆ. ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ, ತಂದೆ ರೇವಣ್ಣ, ತಾಯಿ ಭವಾನಿ, ಅನಸೂಯ, ಸಿ.ಎನ್‌. ಪಾಂಡು, ಸಿ.ಎನ್‌. ಪುಟ್ಟಸ್ವಾಮಿಗೌಡ, ಜಯರಾಂ, ಡಿ.ಕೆ.ನಾಗರಾಜ್‌, ಕಾಳೇಗೌಡ, ಬೋರೇಗೌಡ, ಶೈಲ ಅವರಿಂದ ಈ ಸಾಲ ಪಡೆದಿದ್ದಾರೆ. ಪ್ರಜ್ವಲ್‌ ಹೆಸರಲ್ಲಿ ಒಟ್ಟು 36 ಎಕರೆ ಕೃಷಿ ಭೂಮಿಯೂ ಇದೆ. ಜತೆಗೆ, ಪ್ರಜ್ವಲ್‌ ಹೆಸರಿನಲ್ಲಿರುವ ಬ್ಯಾಂಕ್‌ ಖಾತೆಗಳಲ್ಲಿ ಒಟ್ಟು .15.58 ಲಕ್ಷ ನಗದೂ ಇದೆ. ಒಟ್ಟು .37.31 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನೂ ಅವರು ಹೊಂದಿದ್ದಾರೆ. 18 ಹಸುಗಳು, 2 ಎತ್ತುಗಳನ್ನೂ ಪ್ರಜ್ವಲ್‌ ಸಾಕಿಕೊಂಡಿದ್ದರು.

- Advertisement -

Related news

error: Content is protected !!