Sunday, June 29, 2025
spot_imgspot_img
spot_imgspot_img

ವಾಷಿಂಗ್ಟನ್ ಡಿಸಿಯಲ್ಲಿ ಗುಂಡಿನ ದಾಳಿ; ಇಬ್ಬರು ಇಸ್ರೇಲಿ ರಾಯಭಾರ ಕಚೇರಿ ಸಿಬ್ಬಂದಿ ಸಾವು..!

- Advertisement -
- Advertisement -

ವಾಷಿಂಗ್ಟನ್: ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತು ಸಂಗ್ರಹಾಲಯದ ಬಳಿ ನಡೆದ ಗುಂಡಿನ ದಾಳಿಯಲ್ಲಿ ಇಬ್ಬರು ಇಸ್ರೇಲಿ ರಾಯಭಾರ ಕಚೇರಿಯ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

ಫ್ರೀ ಪ್ಯಾಲೆಸ್ತೀನ್’ ಎಂದು ಘೋಷಣೆ ಕೂಗುತ್ತಾ ಇಬ್ಬರು ಇಸ್ರೇಲಿ ರಾಯಭಾರ ಸಿಬ್ಬಂದಿ ಮೇಲೆ ದುಷ್ಕರ್ಮಿಯೊಬ್ಬ ಗುಂಡು ಹಾರಿಸಿದ್ದಾನೆ ಎಂದು ಹೇಳಲಾಗಿದೆ. ಗುಂಡು ಹಾರಿಸಿದ ಬಳಿಕ ಒಬ್ಬ ವ್ಯಕ್ತಿ ಫ್ರೀ ಪ್ಯಾಲೆಸ್ತೀನ್ ಎಂದು ಕೂಗಿದ್ದಾನೆ. ವರದಿಗಳ ಪ್ರಕಾರ, ಬುಧವಾರ ರಾತ್ರಿ ವಾಷಿಂಗ್ಟನ್ ಡಿಸಿಯ ಯಹೂದಿ ವಸ್ತುಸಂಗ್ರಹಾಲಯದಲ್ಲಿ ಕಾರ್ಯಕ್ರಮ ನಡೆಯುತ್ತಿತ್ತು. ಈ ಸಂದರ್ಭ ಕೆಲವು ಅಪರಿಚಿತ ದುಷ್ಕರ್ಮಿಗಳು ಹೊರಗೆ ಗುಂಡು ಹಾರಿಸಿದ್ದಾರೆ. ಈ ಘಟನೆಯಲ್ಲಿ ಇಸ್ರೇಲಿ ರಾಯಭಾರ ಕಚೇರಿಯ ಇಬ್ಬರು ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ.

ರಾಜಧಾನಿಯಲ್ಲಿರುವ ಎಫ್‌ಬಿಐ ಕ್ಷೇತ್ರ ಕಚೇರಿಯಿಂದ ಸ್ವಲ್ಪ ದೂರದಲ್ಲಿರುವ ಕ್ಯಾಪಿಟಲ್ ಯಹೂದಿ ವಸ್ತುಸಂಗ್ರಹಾಲಯದ ಹೊರಗೆ ಗುಂಡಿನ ದಾಳಿ ನಡೆದಿದೆ. ಈ ಬಗ್ಗೆ ಎಕ್ಸ್​ನಲ್ಲಿ ಪೋಸ್ಟ್‌ನಲ್ಲಿ ನೋಯೆಮ್ ಸಾವನ್ನು ದೃಢಪಡಿಸಿದ್ದಾರೆ.

- Advertisement -

Related news

error: Content is protected !!