Tuesday, November 10, 2026
spot_imgspot_img
spot_imgspot_img

ದೀಪಾವಳಿಗೆ ಪಟಾಕಿ ಸಿಡಿಸುತ್ತಿದ್ದಾಗ ಗುಂಡಿನ ದಾಳಿ – ಪಂಜಾಬ್‌ನಲ್ಲಿ ಕುಸ್ತಿಪಟು ಹತ್ಯೆ..!

- Advertisement -
- Advertisement -

ಚಂಡೀಗಢ: ದೀಪಾವಳಿ ಹಬ್ಬ ಹಿನ್ನೆಲೆ ಮನೆಯ ಹೊರಗೆ ಪಟಾಕಿ ಸಿಡಿಸುತ್ತಿದ್ದ ಕುಸ್ತಿಪಟುವನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಪಂಜಾಬ್‌ನ ಕಪುರ್ತಲಾದಲ್ಲಿ ನಡೆದಿದೆ.

ಮೃತನನ್ನು ಕಪುರ್ತಲಾದ ಮೊಹಲ್ಲಾ ಮೆಹ್ತಾಬ್‌ಗಢ ನಿವಾಸಿ ಮಣಿ ಅಲಿಯಾಸ್ ಪೈಲ್ವಾನ್(27) ಎಂದು ಗುರುತಿಸಲಾಗಿದೆ. ಭಾನುವಾರ ಸಂಜೆ ಮನೆಯ ಹೊರಗೆ ದೀಪಾವಳಿ ಹಬ್ಬದ ಸಂಭ್ರಮದಲ್ಲಿ ಪಟಾಕಿ ಸಿಡಿಸುತ್ತಿದ್ದ ವೇಳೆ ದುಷ್ಕರ್ಮಿಗಳು ಆತನ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ ಎನ್ನಲಾಗಿದೆ.

ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಮಣಿಯನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ, ಪರೀಕ್ಷಿಸಿದ ವೈದ್ಯರು ಆತ ಮೃತಪಟ್ಟಿರುವುದಾಗಿ ಘೋಷಿಸಿದ್ದಾರೆ. ಮಣಿಯ ತಂದೆ ಬಗ್ಗಾ ಅವರು, ಇತ್ತೀಚೆಗಷ್ಟೇ ಮಣಿಗೆ ಮದುವೆಯಾಗಿತ್ತು. ಆತನಿಗೆ ಯಾರೊಂದಿಗೂ ಯಾವುದೇ ವೈಷಮ್ಯ ಅಥವಾ ಜಗಳ ಇರಲಿಲ್ಲ ಎಂದು ತಿಳಿಸಿದ್ದಾರೆ.

ಘಟನೆ ಕುರಿತು ಮಾಹಿತಿ ಲಭಿಸಿದ ತಕ್ಷಣ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಗುಂಡೇಟಿನಿಂದ ಮಣಿ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಳ ಬಂಧನಕ್ಕಾಗಿ ಹಲವು ತಂಡಗಳನ್ನು ರಚಿಸಿದ್ದು, ದುಷ್ಕರ್ಮಿಗಳ ಪತ್ತೆಗೆ ತನಿಖೆ ಮುಂದುವರಿದಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!