Saturday, June 28, 2025
spot_imgspot_img
spot_imgspot_img

ಆರೋಗ್ಯ ಸಚಿವ ಶ್ರೀರಾಮುಲು ತಾಯಿ ಹೊನ್ನೂರಮ್ಮ ನಿಧನ

- Advertisement -
- Advertisement -

ಬಳ್ಳಾರಿ:ಆರೋಗ್ಯ ಸಚಿವ ಶ್ರೀರಾಮುಲು ಅವರ ತಾಯಿ ಹೊನ್ನೂರಮ್ಮ ವಿಧಿವಶರಾಗಿದ್ದಾರೆ. 90 ವರ್ಷ ವಯಸ್ಸಾಗಿದ್ದ ಹೊನ್ನೂರಮ್ಮ ಅನಾರೋಗ್ಯದಿಂದ ಬಳಲುತ್ತಿದ್ದು, ನಿನ್ನೆ ತಡರಾತ್ರಿ ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲ ದಿನಗಳ ಹಿಂದಷ್ಟೇ ಅವರಿಗೆ ಕೊರೊನಾ ಪಾಸಿಟಿವ್ ಬಂದಿತ್ತು. ಬಳಿಕ ಅವರನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರು ಗುಣಮುಖರಾಗಿ ಕಳೆದ 3 ದಿನಗಳ ಹಿಂದಷ್ಟೇ ಮನೆಗೆ ಮರಳಿದ್ದರು.

ಮತ್ತೆ ನಿನ್ನೆ ತಡರಾತ್ರಿ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದ ಕಾರಣ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ವಿಧಿವಶರಾಗಿದ್ದಾರೆ. ಇಂದು ಬೆಳಿಗ್ಗೆ ಕುಟುಂಬಸ್ಥರು ಹಾಗೂ ಆಪ್ತರ ಸಮ್ಮುಖದಲ್ಲಿ ಅಂತ್ಯಸಂಸ್ಕಾರ ನೆರವೇರಿಸಲಾಗಿದೆ. ಇನ್ನು ಹೊನ್ನೂರಮ್ಮ ಅವರ ನಿಧನಕ್ಕೆ ಸಿಎಂ ಬಿ.ಎಸ್.ಯಡಿಯೂರಪ್ಪ ಸೇರಿದಂತೆ ಹಲವಾರು ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!