Sunday, September 6, 2026
spot_imgspot_img
spot_imgspot_img

ಸಚಿವ ಶ್ರೀರಾಮುಲುಗೆ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಯಡಿಯೂರಪ್ಪ ಸಚಿವರ ಖಾತೆ ಹಂಚಿಕೆಯಲ್ಲಿ ಕೆಲವು ಬದಲಾವಣೆ ಮಾಡಿದ್ದಾರೆ. ಆರೋಗ್ಯ ಸಚಿವ ಶ್ರೀರಾಮುಲು ಬಳಿ ಇದ್ದ ಆರೋಗ್ಯ ಮತ್ತು ಹಿಂದುಳಿದ ವರ್ಗ ಕಲ್ಯಾಣ ಖಾತೆ ಹಿಂಪಡೆದುಕೊಂಡಿದ್ದಾರೆ. ಆರೋಗ್ಯ ಇಲಾಖೆ ಹೊಣೆಯನ್ನು ಸಚಿವ ಡಾ. ಸುಧಾಕರ್ ಅವರಿಗೆ ನೀಡಲಾಗಿದೆ.

ಅದೇ ರೀತಿ ಹಿಂದುಳಿದ ವರ್ಗ ಕಲ್ಯಾಣ ಖಾತೆಯನ್ನು ಸಿಎಂ ತಮ್ಮ ಬಳಿ ಇರಿಸಿಕೊಂಡಿದ್ದಾರೆ. ಸಚಿವ ಶ್ರೀರಾಮುಲು ಅವರಿಗೆ ಸಮಾಜ ಕಲ್ಯಾಣ ಇಲಾಖೆಯ ಜವಾಬ್ದಾರಿ ನೀಡಲಾಗಿದೆ. ಆರೋಗ್ಯ ಇಲಾಖೆಗೆ ಹೋಲಿಸಿದರೆ ಇದು ಸ್ವಲ್ಪ ಹೆಚ್ಚು ಮಹತ್ವದ ಖಾತೆಯಾಗಿದೆ.

ಈ ಮಧ್ಯೆ ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಸಚಿವ ಶ್ರೀರಾಮುಲು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.

- Advertisement -

Related news

error: Content is protected !!