Saturday, April 27, 2024
spot_imgspot_img
spot_imgspot_img

ಕಲ್ಲಡ್ಕ ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯಲ್ಲಿ “ರಾಷ್ಟ್ರೀಯ ವಿಜ್ಞಾನ ದಿನಾಚರಣೆ “

- Advertisement -G L Acharya panikkar
- Advertisement -

ಕಲ್ಲಡ್ಕ: ಶ್ರೀರಾಮ ಹಿರಿಯ ಪ್ರಾಥಮಿಕ ಶಾಲೆಯ ವೇದವ್ಯಾಸ ಧ್ಯಾನ ಮಂದಿರದಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆಯನ್ನು ಫೆ.27 ರಂದು ಆಚರಿಸಲಾಯಿತು. ಕಾರ್ಯಕ್ರಮವನ್ನು ಅತಿಥಿಗಳಿಂದ ತುಳಸಿ ಗಿಡಕ್ಕೆ ನೀರು ಹಾಕುವುದರ ಮೂಲಕ ಉದ್ಘಾಟಿಸಲಾಯಿತು.


ಅತಿಥಿಗಳಿಗೆ ಗಿಡ ನೀಡಿ ಕಾರ್ಯಕ್ರಮಕ್ಕೆ ಸ್ವಾಗತಿಸಲಾಯಿತು. ವಿದ್ಯಾರ್ಥಿಗಳು ವಿಜ್ಞಾನಕ್ಕೆ ಸಂಬಂಧಪಟ್ಟಂತಹ ಪ್ರಯೋಗಗಳನ್ನು ಪ್ರದರ್ಶಿಸಿದರು. ಹಂಸ ಹಾಗೂ ಸಾನ್ವಿ ಪರಿಸರ ಗೀತೆ ಹಾಡಿದರು. ದಿನದ ಮಹತ್ವವನ್ನು ಏಳನೇ ತರಗತಿಯ ವಿಶ್ವೇಶ ವಿವರಿಸಿದರು. “ವಿಶೇಷವಾದ ಜ್ಞಾನ ಹೊಂದಿರುವುದೇ ವಿಜ್ಞಾನ” ಎಂದು ಶ್ರೀರಾಮ ಪದವಿ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ಸುಬ್ರಹ್ಮಣ್ಯ ಭಟ್ ವಿಜ್ಞಾನದ ಬಗ್ಗೆ ವಿವರಿಸುತ್ತಾ ಹೇಳಿದರು.

ವಿಜ್ಞಾನಕ್ಕೆ ಸಂಬಂಧಪಟ್ಟಂತಹ ಹಲವಾರು ಸ್ಪರ್ಧೆಗಳನ್ನು ಏರ್ಪಡಿಸಿದ್ದು ವಿಜೇತರಾದ ವಿದ್ಯಾರ್ಥಿಗಳಿಗೆ ಬಹುಮಾನ ವನ್ನು ವಿತರಿಸಲಾಯಿತು. ಅಧ್ಯಾಪಕರಾದ ರಾಜೇಶ್ವರಿ ಬಹುಮಾನ ವಾಚಿಸಿದರು.
ನಂತರ ವಿದ್ಯಾರ್ಥಿಗಳೇ ತಯಾರಿಸಿದ ವಿಜ್ಞಾನ ಮಾದರಿಗಳನ್ನು ವೀಕ್ಷಿಸಿದರು. ವಿದ್ಯಾರ್ಥಿಗಳು ತಾವು ತಯಾರಿಸಿದ ಮಾದರಿಗಳ ವಿವರಣೆಯನ್ನು ನೀಡಿದರು.

ಏಳನೇ ತರಗತಿಯ ವಿದ್ಯಾರ್ಥಿಗಳು ಕೊರೋನ ಕುರಿತಾದ ಕಿರು ಪ್ರಹಸನ ಮಾಡಿದರು. ವೇದಿಕೆಯಲ್ಲಿ ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿನ ಅಧ್ಯಕ್ಷರು ಹಾಗೂ ಕುಂಡಡ್ಕ ಹಾಲು ಉತ್ಪಾದಕರ ಸೇವಾ ಸಂಘದ ನಿರ್ದೇಶಕರಾದ ಜಯಪ್ರಕಾಶ್ ನಾಯಕ್ ಎನ್ , ವಿಟ್ಲ ಮುಡ್ನೂರು ಗ್ರಾಮ ಪಂಚಾಯಿತಿ ಸದಸ್ಯರಾದ ಪ್ರೇಮಲತಾ ಪಟ್ಲ , ಯುವ ಕೇಸರಿ ಚಂದಳಿಕೆ ಇದರ ಪ್ರಧಾನ ಕಾರ್ಯದರ್ಶಿಯಾದ ಯೋಗೀಶ ಕೆ.

ಗೋಳ್ತಮಜಲು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅಭಿಷೇಕ್ ಶೆಟ್ಟಿ, ಶ್ರೀರಾಮ ಆಡಳಿತ ಮಂಡಳಿಯ ಸದಸ್ಯರಾದ ಲಕ್ಷ್ಮಿ ರಘುರಾಜ್ , ಶ್ರೀರಾಮ ಪದವಿಪೂರ್ವ ಕಾಲೇಜಿನ ಭೌತಶಾಸ್ತ್ರ ಉಪನ್ಯಾಸಕರಾದ ನಂದ ಹಾಗೂ ಮುಖ್ಯೋಪಾಧ್ಯಾಯರಾದ ರವಿರಾಜ ಕಣಂತೂರು ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ಭಾರ್ಗವರಾಮ ನಿರೂಪಿಸಿ ಗಗನ್ ಸ್ವಾಗತಿಸಿ ಅದಿತಿ ಧನ್ಯವಾದ ಸಮರ್ಪಿಸಿದರು.

- Advertisement -

Related news

error: Content is protected !!